ನರೇಂದ್ರ ಮೋದಿ 
ದೇಶ

ಬಿಹಾರ ಚುನಾವಣೆ: ಮೋದಿ 'ಮನ್ ಕಿ ಬಾತ್‌' ತಡೆಗೆ ಆಯೋಗ ನಕಾರ

ಬಿಹಾರ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೋ ಭಾಷಣ 'ಮನ್ ಕಿ ಬಾತ್‌'ಗೆ ತಡೆ ನೀಡಬೇಕು ಎಂಬ ಕಾಂಗ್ರೆಸ್...

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೋ ಭಾಷಣ 'ಮನ್ ಕಿ ಬಾತ್‌'ಗೆ ತಡೆ ನೀಡಬೇಕು ಎಂಬ ಕಾಂಗ್ರೆಸ್ ಮನವಿಯನ್ನು ಚುನಾವಣಾ ಆಯೋಗ ಬುಧವಾರ ತಿರಸ್ಕರಿಸಿದೆ.

ಪ್ರಧಾನಿ ಮೋದಿ ಅವರು ತಮ್ಮ 'ಮನ್ ಕಿ ಬಾತ್‌' ಕಾರ್ಯಕ್ರಮದ ಮೂಲಕ ಸರ್ಕಾರದ ಸಾಧನೆಗಳನ್ನು ಹಾಗೂ ಭರವಸೆಗಳನ್ನು ನೀಡುವ ಸಾಧ್ಯತೆ ಇದ್ದು, ಇದು ಮತದಾರರ ಮೇಲೆ ಪ್ರಭಾವ ಬೀರಲಿದೆ. ಹೀಗಾಗಿ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ತಡೆ ನೀಡಬೇಕು ಎಂದು ಕಾಂಗ್ರೆಸ್ ಆಯೋಗಕ್ಕೆ ಮನವಿ ಸಲ್ಲಿಸಲು ಮುಂದಾಗಿತ್ತು.

ಈ ಬಗ್ಗೆ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಚುನಾವಣಾ ಆಯೋಗದ ಹಿರಿಯ ಅಧಿಕಾರಿಯೊಬ್ಬರು, ಮನ್ ಕಿ ಬಾತ್ ನಲ್ಲಿ ಪ್ರಧಾನಿ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ಯಾವುದೇ ಆಮಿಷಗಳನ್ನು ಒಡ್ಡಿದರೆ ಸ್ವಯಂ ಪ್ರೇರಿತವಾಗಿ ತಡೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಹಾಗೂ ದೆಹಲಿ ವಿಧಾನಸಭೆ ಚುನಾವಣೆಯಲ್ಲೂ 'ಮನ್ ಕಿ ಬಾತ್‌'ಗೆ ತಡೆ ನೀಡಬೇಕು ಎಂದು ಆಯೋಗಕ್ಕೆ ಮನವಿ ಮಾಡಲಾಗಿತ್ತು. ಇದನ್ನು ಪರಿಶೀಲಿಸಿದ್ದ ಆಯೋಗ, ರಾಜ್ಯ ಸರ್ಕಾರದ ರೇಡಿಯೋ ಮೂಲಕ ಅವರ ಭಾಷಣ ಮಾಡುವುದಿಲ್ಲ ಮತ್ತು ಅವರು ರಾಷ್ಟ್ರವ್ಯಾಪಿ ಕೇಳುಗರನ್ನು ಉದ್ದೇಶಿಸಿ ಮಾತನಾಡುತ್ತಾರೆ ಎಂದು ಹೇಳಿ, ತಡೆ ನೀಡಲು ನಿರಾಕರಿಸಿತ್ತು.

ಮುಂದಿನ ತಿಂಗಳು ಐದು ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅಕ್ಟೋಬರ್ 12ರಂದು ಮೊದಲ ಹಂತ ಹಾಗೂ ನವೆಂಬರ್ 5ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಸೆಪ್ಟೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!