ನರೇಂದ್ರ ಮೋದಿ 
ದೇಶ

ಬಿಹಾರ ಚುನಾವಣೆ: ಮೋದಿ 'ಮನ್ ಕಿ ಬಾತ್‌' ತಡೆಗೆ ಕಾಂಗ್ರೆಸ್ ಮನವಿ

ಬಿಹಾರ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೋ ಭಾಷಣ 'ಮನ್ ಕೀ ಬಾತ್‌'ಗೆ ತಡೆ ನೀಡಬೇಕು...

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೋ ಭಾಷಣ 'ಮನ್ ಕಿ ಬಾತ್‌'ಗೆ ತಡೆ ನೀಡಬೇಕು ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಆದರೆ ಚುನಾವಣಾ ಆಯೋಗ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರು ತಮ್ಮ 'ಮನ್ ಕಿ ಬಾತ್‌' ಕಾರ್ಯಕ್ರಮದ ಮೂಲಕ ಸರ್ಕಾರದ ಸಾಧನೆಗಳನ್ನು ಹಾಗೂ ಭರವಸೆಗಳನ್ನು ನೀಡುವ ಸಾಧ್ಯತೆ ಇದ್ದು, ಇದು ಮತದಾರರ ಮೇಲೆ ಪ್ರಭಾವ ಬೀರಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಮಹಾರಾಷ್ಟ್ರ ಹಾಗೂ ದೆಹಲಿ ವಿಧಾನಸಭೆ ಚುನಾವಣೆಯಲ್ಲೂ 'ಮನ್ ಕಿ ಬಾತ್‌'ಗೆ ತಡೆ ನೀಡಬೇಕು ಎಂದು ಆಯೋಗಕ್ಕೆ ಮನವಿ ಮಾಡಲಾಗಿತ್ತು. ಇದನ್ನು ಪರಿಶೀಲಿಸಿದ್ದ ಆಯೋಗ, ರಾಜ್ಯ ಸರ್ಕಾರದ ರೇಡಿಯೋ ಮೂಲಕ ಅವರ ಭಾಷಣ ಮಾಡುವುದಿಲ್ಲ ಮತ್ತು ಅವರು ರಾಷ್ಟ್ರವ್ಯಾಪಿ ಕೇಳುಗರನ್ನು ಉದ್ದೇಶಿಸಿ ಮಾತನಾಡುತ್ತಾರೆ ಎಂದು ಹೇಳಿ, ತಡೆ ನೀಡಲು ನಿರಾಕರಿಸಿತ್ತು.

ಮುಂದಿನ ತಿಂಗಳು ಐದು ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅಕ್ಟೋಬರ್ 12ರಂದು ಮೊದಲ ಹಂತ ಹಾಗೂ ನವೆಂಬರ್ 5ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಸೆಪ್ಟೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆಯಾಗಿದ್ರೂ ಪ್ರೆಸ್ ಮೀಟ್ ನಲ್ಲಿ ಪೊಲೀಸರ 'ಲಲ್ಲೆ': Video ವೈರಲ್, ಜನಾಕ್ರೋಶ!

ಅಕ್ರಮ ಸಂಬಂಧಕ್ಕೆ ಮೂವರು ಬಲಿ: ಪತ್ನಿ ಕೊಂದು ಪತಿ ಆತ್ಮಹತ್ಯೆ; ಮಹಿಳೆಯ ಪ್ರಿಯಕರನೂ ಸಾವಿಗೆ ಶರಣು!

SCROLL FOR NEXT