ಉಗ್ರರ ಗಡಿ ನುಸುಳುವಿಕೆ ಯತ್ನ ವಿಫಲ: ಬಿಎಸ್ಎಫ್ ಯೋಧರಿಂದ 2 ಉಗ್ರರ ಹತ್ಯೆ
ಭಾರತದೊಳಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ...
ಜಮ್ಮು-ಕಾಶ್ಮೀರ: ಭಾರತದೊಳಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ.
ಇಂದು ಬೆಳಗ್ಗೆ ಜಮ್ಮು ಕಾಶ್ಮೀರದ ಬಂಡೀಪೋರಾ ಪ್ರದೇಶದ ಬಳಿ ಭಯೋತ್ಪಾದಕರ ತಂಡವೊಂದು ಭಾರತದ ಗಡಿಯೊಳಗೆ ನುಸುಳಲು ಯತ್ನಿಸುತ್ತಿತ್ತು. ಈ ವೇಳೆ ಭಯೋತ್ಪಾದಕರ ವಿರುದ್ಧ ಗುಂಡಿನ ಚಕಮಕಿ ನಡೆಸಿದ ಬಿಎಸ್ಎಫ್ ಪಡೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
ಉಗ್ರರು, ಸೇನಾಪಡೆಯ ನಡುವೆ ಭಾರಿ ಗುಂಡಿನ ಚಕಮಕಿ ನಡೆಯುತ್ತಿದ್ದು, ಇನ್ನಷ್ಟು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಭಾರತೀಯ ಯೋಧರು ಶೋಧಕಾರ್ಯ ನಡೆಸುತ್ತಿದ್ದಾರೆ.
ಭಾರತೀಯ ಯೋಧರ ಗುಂಡೇಟಿಗೆ ಬಲಿಯಾದ ಇಬ್ಬರು ಭಯೋತ್ಪಾದಕರ ಬಳಿಯಿದ್ದ 2 ಎಕೆ 47 ಗನ್ ಗಳು ವಶ ಪಡಿಸಿಕೊಳ್ಳಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.