ದೇಶ

ಕೇಂದ್ರವೂ ನೇತಾಜಿ ಸಂಬಂಧಿತ ದಾಖಲೆ ಬಿಡುಗಡೆ ಮಾಡಲಿ: ಕುಟುಂಬ ಸದಸ್ಯರ ಆಗ್ರಹ

ಸುಭಾಷ್ ಚಂದ್ರ ಬೋಸರ ಕುಟುಂಬ ಸದಸ್ಯರು, ಕೇಂದ್ರ ಸರ್ಕಾರವೂ ತನ್ನ ಬಳಿ ಇರುವ ರಹಸ್ಯ ದಾಖಲೆಗಳನ್ನು ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೋಲ್ಕತ್ತ: ಪಶ್ಚಿಮ ಬಂಗಾಳ ಸರ್ಕಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಿಡುಗಡೆ ಮಾಡಿರುವುದನ್ನು ಐತಿಹಾಸಿಕ ಎಂದು ಬಣ್ಣಿಸಿರುವ ಸುಭಾಷ್ ಚಂದ್ರ ಬೋಸರ ಕುಟುಂಬ ಸದಸ್ಯರು, ಕೇಂದ್ರ ಸರ್ಕಾರವೂ ತನ್ನ ಬಳಿ ಇರುವ ರಹಸ್ಯ ದಾಖಲೆಗಳನ್ನು ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನೇತಾಜಿ ಅವರಿಗೆ ಸಂಬಂಧಪಟ್ಟಂತ 64 ಕಡತಗಳನ್ನು ಶುಕ್ರವಾರ ಬಿಡುಗಡೆಗೊಳಿಸಿದ್ದು, ನೇತಾಜಿ ಕುಟುಂಬಕ್ಕೆ ಗಣಕೀಕೃತ ದಾಖಲೆಗಳನ್ನು ಹಸ್ತಾಂತರ ಮಾಡಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕುಟುಂಬ ಸದಸ್ಯರು, ಕೇಂದ್ರ ಸರ್ಕಾರವೂ ದಾಖಲೆಗಳನ್ನು ಬಿಡುಗಡೆಗೊಳಿಸಲಿ ಎಂದು ಒತ್ತಾಯಿಸಿದ್ದಾರೆ.
ಸುಭಾಷ್ ಚಂದ್ರ ಬೋಸ್ ಅವರ ಕಣ್ಮರೆಗೆ ಸಂಬಂಧಿಸಿದ ಮುಖ್ಯ ಕಡತಗಳು ಕೇಂದ್ರ ಸರ್ಕಾರದ ಬಳಿ ಇವೆ. ಪಶ್ಚಿಮ ಬಂಗಾಳ ಸರ್ಕಾರ ಕಡತಗಳನ್ನು ಬಿಡುಗಡೆ ಮಾಡಿರುವುದರಿಂದ ಕೇಂದ್ರ ಸರ್ಕಾರಕ್ಕೆ ತನ್ನ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡದೇ ಬೇರೆ ದಾರಿ ಇಲ್ಲ ಎಂದು ನೇತಾಜಿ ಮೊಮ್ಮಗ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್