ದೆಹಲಿ ಸರ್ಕಾರದ ಅಕ್ರಮ ಆದೇಶ ಪಾಲಿಸದಂತೆ ಅಧಿಕಾರಿಗಳಿಗೆ ಜಂಗ್ಎಚ್ಚರಿಕೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೊರಡಿಸುವ ಅಕ್ರಮ ಆದೇಶಗಳನ್ನು ಪಾಲಿಸದಂತೆ ದೆಹಲಿ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೊರಡಿಸುವ ಅಕ್ರಮ ಆದೇಶಗಳನ್ನು ಪಾಲಿಸದಂತೆ ದೆಹಲಿ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ಐಎಎಸ್, ಡಿಎಎನ್ಐಸಿಎಸ್ ಸೇರಿದಂತೆ ಎಲ್ಲಾ ಸರ್ಕಾರಿ ಅಧಿಕಾರಿಗಳಿಗೂ ನಜೀಬ್ ಜಂಗ್, ಆದೇಶ ಪಾಲಿಸದೇ ಇದ್ದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ದೆಹಲಿಯಲ್ಲಿ ಸಂವಿಧಾನ, ಕಾನೂನು ಮತ್ತು ನಿಯಮಗಳ ಉಲ್ಲಂಘನೆಯಾಗುತ್ತಿರುವುದನ್ನು ಕೇಂದ್ರ ಸರ್ಕಾರ ಗಮನಿಸಿದೆ. ಸರ್ಕಾರದ ನಿರ್ಧಾರಗಳನ್ನು ಕೇಂದ್ರ ಸರ್ಕಾರ ಅಕ್ರಮ ಎಂದು ಹೇಳಿದೆ. ಆದ್ದರಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೊರಡಿಸುವ ಅಕ್ರಮ ಆದೇಶಗಳನ್ನು ಪಾಲಿಸಬಾರದೆಂದು ನಜೀಬ್ ಜಂಗ್ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ನಜೀಬ್ ಜಂಗ್ ಹಾಗೂ ಅರವಿಂದ್ ಕೇಜ್ರಿವಾಲ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ನಜೀಬ್ ಜಂಗ್ ಅವರು ಕೇಂದ್ರ ಸರ್ಕಾರದ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.