ಆಸಿಯಾ ಅಂದ್ರಾಬಿ 
ದೇಶ

ಕಾಶ್ಮೀರದಲ್ಲಿ ಪಾಕ್ ಧ್ವಜ ಹಾರಿಸಿದ ಮೂಲಭೂತವಾದಿ ನಾಯಕಿ ಆಸಿಯಾ ಬಂಧನ

ಪಾಕಿಸ್ತಾನದ ಧ್ವಜ ಹಾರಾಟ ಮಾಡಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಮೂಲಭೂತವಾದಿ ಸಂಘಟನೆ ದುಖ್ತಾರನ್-ಎ-ಮಿಲ್ಲತ್...

ಶ್ರೀನಗರ: ಪಾಕಿಸ್ತಾನದ ಧ್ವಜ ಹಾರಾಟ ಮಾಡಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಮೂಲಭೂತವಾದಿ ಸಂಘಟನೆ ದುಖ್ತಾರನ್-ಎ-ಮಿಲ್ಲತ್ ಇದರ ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಅವರನ್ನು ಶುಕ್ರವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬಂಧಿಸಿದ್ದಾರೆ.

ಇಂದು ಬೆಳಿಗ್ಗೆ ಆಸಿಯಾ ಅಂದ್ರಾಬಿ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಆಸಿಯಾ ಅವರನ್ನು ಪಾಕಿಸ್ತಾನದ ಧ್ವಜ ಹಾರಾಟ ಮತ್ತು ಪಾಕಿಸ್ತಾನದ ಉಗ್ರ ಸಂಘಟನೆ ಮುಖ್ಯಸ್ಥ ಹಫೀಝ್ ಸಯೀದ್ ಭಾಗವಹಿಸಿದ್ದ ಸಭೆಯಲ್ಲಿ ಪೋನ್ ಮೂಲಕ ಮಾತನಾಡಿದ ಪ್ರಕರಣಗಳ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ಶ್ರೀನಗರದ ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದಿದ್ದು, ಬಂಧಿಖಾನೆಯಲ್ಲಿರಿಸಲಾಗಿದೆ. ಮುಂಬೈ ದಾಳಿಯ ರುವಾರಿ ಹಫೀಝ್ ಸಯೀದ್ ಆಯೋಜಿಸಿದ್ದ ಸಭೆಯಲ್ಲಿ ಪೋನ್ ಮೂಲಕ ಮಾತನಾಡಿ ವಿವಾದವನ್ನೆಬ್ಬಿಸಿದ್ದರು. ಬಳಿಕ ಅವರ ಮೇಲೆ ಪೊಲೀಸರು ಪ್ರಕರಣವೊಂದನ್ನು ದಾಖಲಿಸಿದ್ದರು. ಅಲ್ಲದೆ, ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತಮ್ಮ ಬೆಂಬಲಿಗರೊಂದಿಗೆ ಪಾಕ್ ಧ್ವಜಾರೋಹಣ ಮಾಡುವ ಮೂಲಕ ದೇಶ ದ್ರೋಹ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ