ರಾಬರ್ಟ್ ವಾಧ್ರ 
ದೇಶ

ಅಕ್ರಮ ಹಣ ವರ್ಗಾವಣೆ: ವಾದ್ರ ಸಂಬಂಧಿಸಿದ ಕಂಪನಿ ವಿರುದ್ಧ ಎಫ್ಐಆರ್

ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಗೆ ಸಂಬಂಧಿಸಿದ ಸಂಸ್ಥೆಯ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

ನವದೆಹಲಿ: ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಗೆ ಸಂಬಂಧಿಸಿದ ಸಂಸ್ಥೆಯ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.
ಭೂ ಕಬಳಿಕೆ ಪ್ರಕರಣದಿಂದ ರಾಜಸ್ಥಾನದ ಮೂಲದ ಸಂಸ್ಥೆಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದ್ದು, ಸಂಸ್ಥೆಗೂ ರಾಬರ್ಟ್ ವಾದ್ರಗೂ ಸಂಬಂಧವಿರುವುದು ತಿಳಿದುಬಂದಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಅಕ್ರಮ ಭೂ ಕಬಳಿಕೆ ಮಾಡಿರುವ ಸಂಸ್ಥೆಯೊಂದಿಗೆ ರಾಬರ್ಟ್ ವಾದ್ರಗೂ ಸಂಬಂಧವಿರುವುದರ ಬಗ್ಗೆ ಮಾಧ್ಯಮಗಳ ವರದಿಯನ್ನೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಎಫ್ಐಆರ್ ನಲ್ಲಿ ನೇರವಾಗಿ ವಾದ್ರ ಅವರ ಹೆಸರನ್ನು ಸೇರಿಸಲಾಗಿಲ್ಲ. ಆದರೆ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಕಾಂಗ್ರೆಸ್ ನ ವಕ್ತಾರ ಶಕೀಲ್ ಅಹ್ಮದ್ ಹೇಳಿಕೆ ನೀಡಿದ್ದು ರಾಜಸ್ಥಾನ ಸರ್ಕಾರ ರಾಜಕೀಯ ಹಗೆತನ ಸಾಧಿಸುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!