ಏಕ್ತಾ ಯಾತ್ರೆ: ಹಾರ್ದಿಕ್ ಪಟೇಲ್ ಹಾಗೂ ಬೆಂಬಲಿಗರ ಬಂಧನ
ಗುಜರಾತ್ನಲ್ಲಿ ಪಟೇಲ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪತಿದಾರ್ ಅನಾಮತ್ ಆಂದೋಲನ್ ಸಮಿತಿಯ ಸಂಚಾಲಕ ಹಾರ್ದಿಕ್...
ಸುರತ್: ಗುಜರಾತ್ನಲ್ಲಿ ಪಟೇಲ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪತಿದಾರ್ ಅನಾಮತ್ ಆಂದೋಲನ್ ಸಮಿತಿಯ ಸಂಚಾಲಕ ಹಾರ್ದಿಕ್ ಪಟೇಲ್ ಅವರನ್ನು ಶನಿವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ.
ಪಟೇಲ್ ಸಮುದಾಯಕ್ಕೆ ಸರ್ಕಾರಿ ನೌಕರಿ ಹಾಗೂ ಶಾಲಾ-ಕಾಲೇಜು ಪ್ರವೇಶದಲ್ಲಿ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟದ ಭಾಗವಾಗಿ ಹಾರ್ದಿಕ್ ಪಟೇಲ್ ಇಂದು ಏಕ್ತಾ ಯಾತ್ರೆ ಕೈಗೊಂಡಿದ್ದರು. ಆದರೆ ಯಾತ್ರೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ.
ನಿಷೇಧದ ನಡುವೆಯೂ ಏಕ್ತಾ ಯಾತ್ರೆ ನಡೆಸಲು ಮುಂದಾದ ಹಾರ್ದಿಕ್ ಪಟೇಲ್ ಹಾಗೂ ಅವರ 78ಕ್ಕೂ ಹೆಚ್ಚು ಬೆಂಬಲಿಗರನ್ನು ಸೂರತ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾರ್ದಿಕ್ ಮತ್ತು ಅವರ ಬೆಂಬಲಿಗರನ್ನು ಸೂರತ್ನ ವರಚ್ಚಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ಗುಜರಾತ್ ಸರ್ಕಾರ ಮತ್ತು ಪೊಲೀಸರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದು ಹಾರ್ದಿಕ್ ಟ್ವಿಟ್ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.