ಅಸಾರಾಂ ಬಾಪು 
ದೇಶ

ಆಸಾರಾಂ ವಿರುದ್ಧದ ಸಾಕ್ಷಿಗಳ ಮೇಲೆ ದಾಳಿ, ಇಬ್ಬರ ಬಂಧನ

ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಜೋಧ್ ಪುರ್ ಜೈಲಿನಲ್ಲಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ವಿರುದ್ಧದ ಸಾಕ್ಷಿಗಳ...

ಅಹಮದಾಬಾದ್: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಜೋಧ್ ಪುರ್ ಜೈಲಿನಲ್ಲಿರುವ  ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ವಿರುದ್ಧದ ಸಾಕ್ಷಿಗಳ ಮೇಲೆ ದಾಳಿ ನಡೆಸಿದ ಇಬ್ಬರನ್ನು ಬಂಧಿಸಲಾಗಿದೆ.

ಅಸಾರಾಂ ಬಾಪು ಪ್ರಕರಣ ಸಂಬಂಧ 7 ಸಾಕ್ಷಿಗಳ ಮೇಲೆ ಇದುವರೆಗೂ ದಾಳಿ ನಡೆದಿತ್ತು. ಹೀಗಾಗಿ ಕಳೆದ ವಾರ ವಿಚಾರಣೆ ನಡೆಸಿದ ಸುಪ್ರಿಂ ಕೋರ್ಟ್ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಆದೇಶಿಸಿತ್ತು.  ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು ಸಾಕ್ಷಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

 16 ವರ್ಷದ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧ್ ಪುರ ಸೆಷನ್ಸ್ ನ್ಯಾಯಾಲಯ ಅಸಾರಾಂ ಬಾಪು ವಿಚಾರಣೆ ನಡೆಸುತ್ತಿದೆ. ಇನ್ನು ಸೂರತ್ ಮೂಲದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಧಿ ನಗರ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.  ಇಬ್ಬರು ಸಹೋದರಿಯರ ಮೇಲೆ ಅತ್ಯಾತಾರ ನಡೆಸಿದ ಮತ್ತೊಂದು ಪ್ರಕರಣದಲ್ಲಿ ಅಸಾರಾಂ ಬಾಪು ಮತ್ತು ಆತನ ಪುತ್ರ ನಾರಾಯಣ ಸಾಯಿ ವಿರುದ್ಧ ಸೂರತ್ ನ್ಯಾಯಾಲಯ ಕೂಡ ವಿಚಾರಣೆ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್‌ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿಕೆ ಶಿವಕುಮಾರ್‌ ವ್ಯಂಗ್ಯ