ಸಿತಾಪುರ್: ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ತಲುಪಿಲ್ಲ ಎಂದು ಆರೋಪಿಸಿ ಗುಂಪೊಂದು ವೈದ್ಯರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದ ಸೀತಾಪುರ್ ನಲ್ಲಿ ನಡೆದಿದೆ.
ಸರಿಯಾದ ಸಮಯದಲ್ಲಿ ಆ್ಯಂಬುಲೆನ್ಸ್ ಬಾರದ ಹಿನ್ನಲೆಯಲ್ಲಿ ರೋಗಿಯ ಸಂಬಂಧಿಕರು ವೈದ್ಯರನ್ನಾ ತುರ್ತು ನಿಗಾ ಘಟಕದಿಂದ ಹೊರಗೆಳೆದು ಹಿಗ್ಗಾಮಗ್ಗಾ ಥಳಿಸಿದ್ದಾರೆ.
ವೈದ್ಯರಿಗೆ ಹೊಡೆಯುತ್ತಿರುವ ದೃಶ್ಯವನ್ನು ಆಸ್ಪತ್ರೆಯಲ್ಲಿ ಇದ್ದ ಒಬ್ಬ ವ್ಯಕ್ತಿ ಚಿತ್ರೀಕರಿಸಿದ್ದು, ವ್ಯಾಟ್ಸಾಪ್ ನಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ಆಧಾರವಾಗಿಟ್ಟುಕೊಂಡು ಕಾರ್ಯಪ್ರವೃತ್ತರಾದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.