ಸುಪ್ರೀಂಕೋರ್ಟ್ 
ದೇಶ

ನೇತಾಜಿ ಕುರಿತ ದಾಖಲೆ ಬಹಿರಂಗ:ಪಿಐಎಲ್ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮಾಜಿ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಹಿರಂಗಪಡಿಸುವಂತೆ ಕೇಂದ್ರ...

ನವದೆಹಲಿ: ಮಾಜಿ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಹಿರಂಗಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಎ.ಆರ್. ದಾವೆ ಮತ್ತು ಎ.ಕೆ.ಗೋಯಲ್ ಅವರಿದ್ದ ವಿಭಾಗೀಯ ಪೀಠ, ಅರ್ಜಿದಾರರ ಪ್ರಾತಿನಿಧ್ಯದ ಬಗ್ಗೆ ಗೃಹ ಸಚಿವಾಲಯ ಮತ್ತು ಪ್ರಧಾನಮಂತ್ರಿಗಳ ಸಚಿವಾಲಯದ ಪ್ರಧಾನ ಕಾರ್ಯದರ್ಶಿಗಳು ಪ್ರತಿಕ್ರಿಯೆ ನೀಡಲಿ ಎಂದು ಹೇಳಿದೆ.

ಸ್ನೇಹಸಿಸ್ ಮುಖರ್ಜಿ ಅವರ ಅರ್ಜಿಗೆ ಪ್ರತಿಕ್ರಿಯಿಸಿರುವ ನ್ಯಾಯಾಲಯ, ಅರ್ಜಿದಾರರು ಹೈಕೋರ್ಟ್ ಗೆ ಹೋಗಲಿ ಇಲ್ಲವೇ ಕೇಂದ್ರ ಸರ್ಕಾರದ ಪ್ರತಿಕ್ರಿಯೆಗೆ ಕಾಯಲಿ ಎಂದು ಹೇಳಿದೆ.
ಮುಖರ್ಜಿಯವರು ತಮ್ಮ ದೂರಿನಲ್ಲಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಬಗ್ಗೆ ತಿಳಿದುಕೊಳ್ಳುವುದು ಜನರ ಮೂಲಭೂತ ಹಕ್ಕಾಗಿದೆ. ಆದರೆ ಅದನ್ನು ಬಹಿರಂಗಪಡಿಸದೆ ಜನರ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಆಪಾದಿಸಿದ್ದರು. ಅಲ್ಲದೆ ಪಶ್ಟಿಮ ಬಂಗಾಳ ಸರ್ಕಾರ ಬಿಡುಗಡೆ ಮಾಡಿರುವ 64 ದಾಖಲೆಗಳು ಸಾರ್ವಜನಿಕರಿಗೆ ಉಪಯೋಗವಾಗಿದ್ದು, ಆ ಕ್ರಮವನ್ನು ಕೇಂದ್ರ ಸರ್ಕಾರ ಅನುಸರಿಸುವಂತೆ ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಾಲಯ, ಪ್ರತಿಯೊಂದು ಕಡೆ ಮೂಲಭೂತ ಹಕ್ಕಿನ ವಿಷಯ ತರಬೇಡಿ ಎಂದು ಛೀಮಾರಿ ಹಾಕಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ