ರಾಹುಲ್ ಗಾಂಧಿ 
ದೇಶ

ಸ್ಟೀವ್ ಜಾಬ್ಸ್ ರಂತೆ ಕೆಲಸ ಮಾಡಿ:ಉತ್ತರ ಪ್ರದೇಶ ಕೈ ಕಾರ್ಯಕರ್ತರಿಗೆ ರಾಹುಲ್ ಸಲಹೆ

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನರ್ ಸ್ಥಾಪನೆ ಮಾಡಲು ಆ್ಯಪಲ್ ಕಂಪನಿಯ ಸ್ಟೀವ್ ಜಾಬ್ಸ್ ಅವರಂತೆ ಕೆಲಸ ಮಾಡಬೇಕು ಎಂದು ಎಐಸಿಸಿ ಉಪಾಧ್ಯಕ್ಷ ...

ಮಥುರಾ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನರ್ ಸ್ಥಾಪನೆ ಮಾಡಲು ಆ್ಯಪಲ್ ಕಂಪನಿಯ ಸ್ಟೀವ್ ಜಾಬ್ಸ್ ಅವರಂತೆ ಕೆಲಸ ಮಾಡಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

 ಉತ್ತರ ಪ್ರದೇಶದ ಮಥುರಾದ ದೇವಾಲಯಕ್ಕೆ ಭೇಟಿ ನೀಡುವ ಮುನ್ನ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಆ್ಯಪಲ್ ಕಂಪನಿಯ ಸಂಸ್ಥಾಪಕ ಸ್ಚೀವ್ ಜಾಬ್ಸ್ ಅತೀ ಕಡಿಮೆ ಅವಧಿಯಲ್ಲಿ ಹೆಚ್ಚಿನ ಪ್ರಮಾಣದ ಯಶಸ್ಸು ಸಾಧಿಸಿದರು. ಹಾಗೆಯೇ ಭಾರತದಲ್ಲೇ ಅತಿ ಹೆಚ್ಚು ಜನಸಂಖ್ಯೆ ಇರುವ ಉತ್ತರ ಪ್ರದೇಶದಲ್ಲಿ  ನಮ್ಮ ಒಳ್ಳೆಯ ಸಿದ್ದಾಂತಗಳು ನಮ್ಮನ್ನು ನಂ.1 ಆಗಿ ಮಾಡುತ್ತದೆ ಎಂದರು.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮೋದಿ ಅವರು ತಾವು ನೀಡಿದ್ದ ಭರವಸೆಗಳನ್ನು ಮರೆತಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿಯಲ್ಲಿ ಸೋತಿದ್ದಾರೆ. ಎಂದ ಅವರು ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಭಾರತದ ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಅಕೌಂಟ್ ನಲ್ಲಿ 15 ಲಕ್ಷ ಹಣ ಡಿಪಾಸಿಟ್ ಮಾಡುವುದಾಗಿ ನೀಡಿದ್ದ ಭರವಸೆಗಳೆಲ್ಲಾ ಸುಳ್ಳಾಗಿವೆ. ಮೋದಿ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!