ನವದೆಹಲಿ: ದೆಹಲಿಯಿಂದ ಹಾಂಕಾಂಗ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ.
216 ಪ್ರಯಾಣಿಕರು ಮತ್ತು 10 ಸಿಬ್ಬಂದಿಗಳನ್ನು ಹೊತ್ತೊಯ್ಯುತ್ತಿದ್ದ ಡ್ರೀಮ್ ಲೈನರ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
ಮಧ್ಯರಾತ್ರಿ 2.15ರ ವೇಳೆಗೆ ನೇತಾಜಿ ಸುಭಾಶ್ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದ್ದು ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಈಗಾಗಲೇ ಕೆಲವು ಪ್ರಯಾಣಿಕರಿಗೆ ಬದಲೀ ವ್ಯವಸ್ಥೆ ಮಾಡಲಾಗಿದ್ದು, ಇನ್ನುಳಿದವರಿಗೆ ಸ್ಥಳೀಯ ಹೊಟೇಲ್‌ನಲ್ಲಿ ವಾಸ್ತವ್ಯ ಕಲ್ಪಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಗಳವಾರ ಸಂಜೆ 7.30ರ ಹೊತ್ತಿಗೆ ವಿಮಾನವು ಹಾಂಕಾಂಗ್ ಪ್ರಯಾಣವನ್ನು ಮುಂದವರಿಸಲಿದ್ದು, ಪ್ರಯಾಣಿಕರು ಯಾವುದೇ ಆತಂಕ ಪಡಬೇಕಿಲ್ಲ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.