ಸೋಮನಾಥ್ ಭಾರ್ತಿ (ಸಂಗ್ರಹ ಚಿತ್ರ) 
ದೇಶ

ಗೃಹ ಹಿಂಸೆ ಪ್ರಕರಣ: ಭಾರ್ತಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ದೆಹಲಿ ಮಾಜಿ ಸಚಿವ ಸೋಮನಾಥ ಭಾರ್ತಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಮತ್ತೆ ವಜಾಗೊಳಿಸಿದೆ...

ನವದೆಹಲಿ: ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ದೆಹಲಿ ಮಾಜಿ ಸಚಿವ ಸೋಮನಾಥ ಭಾರ್ತಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು  ಅರ್ಜಿಯನ್ನು ದೆಹಲಿ ನ್ಯಾಯಾಲಯ ಮತ್ತೆ ವಜಾಗೊಳಿಸಿದೆ.

ಭಾರ್ತಿ ಪರ ವಕೀಲರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ದೆಹಲಿ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಪತ್ನಿ ಲಿಪಿಕಾ ಮಿತ್ರಾ ಅವರ ಮೇಲೆ ದೈಹಿಕ  ಮತ್ತು ಮಾನಸಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಮನಾಥ ಭಾರ್ತಿ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಕೊಲೆ ಪ್ರಯತ್ನ, ದೈಹಿಕ ಹಿಂಸೆ  ಮತ್ತು ಗೃಹ ಹಿಂಸಾಚಾರ ಪ್ರಕರಣದಡಿಯಲ್ಲಿ ಭಾರ್ತಿ ವಿರುದ್ಧ ವಿಪಿಕಾ ಮಿತ್ರಾ ಅವರು ದೂರು ಸಲ್ಲಿಕೆ ಮಾಡಿದ್ದರು. ಈ ಹಿಂದೆ ಸೋಮನಾಥ ಭಾರ್ತಿ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್  ಕೂಡ ದಾಖಲು  ಮಾಡಿಕೊಂಡಿದ್ದರು.

ಕಳೆದ ಜೂನ್ 10ರಂದು ದೆಹಲಿಯ ದ್ವಾರಕಾದಲ್ಲಿರುವ ಉತ್ತರ ವಿಭಾಗದ ಪೊಲೀಸ್ ಠಾಣೆಯಲ್ಲಿ ಸೋಮನಾಥ ಭಾರ್ತಿ ಅವರ ಪತ್ನಿ ಲಿಪಿಕಾ ಮಿತ್ರಾ ಅವರು ದೂರು ಸಲ್ಲಿಕೆ ಮಾಡಿದ್ದರು.   ಸೋಮನಾಥ ಭಾರ್ತಿ ಮದುವೆಯಾದಾಗಿನಿಂದಲೂ ತಮಗೆ ದೈಹಿಕ ಹಿಂಸೆ ನೀಡುತ್ತಿದ್ದರು. ಅಲ್ಲದೆ ಒಮ್ಮೆ ಕೊಲೆಗೂ ಯತ್ನ ನಡೆಸಿದ್ದರು ಎಂದು ದೂರಿದ್ದರು. ಈ ಹಿನ್ನಲೆಯಲ್ಲಿ ಸೋಮನಾಥ   ಭಾರ್ತಿ ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?