ದೇಶ

ಮೀಸಲಾತಿ ಪುನರ್‌ಪರಿಶೀಲನೆ ಅಗತ್ಯವಿಲ್ಲ: ಭಾಗವತ್‌ಗೆ ಕೇಂದ್ರ ಉತ್ತರ

Rashmi Kasaragodu
ನವದೆಹಲಿ:  ಮೀಸಲಾತಿ ನೀತಿಯನ್ನು ಪುನರ್ ಪರಿಶೀಲನೆ ನಡೆಸುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಆರೆಸ್ಸೆಸ್ಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಹೇಳಿದೆ.
ಮೀಸಲಾತಿ ನೀತಿಯನ್ನು ಪುನರ್‌ಪರಿಶೀಲನೆ ನಡೆಸಬೇಕೆಂಬ ಭಾಗವತ್ ಹೇಳಿಕೆಗೆ ಬಿಜೆಪಿ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡಿಲ್ಲ . ಅದೇ ವೇಳೆ ಮೀಸಲಾತಿ ಬಗ್ಗೆ ಸಂವಿಧಾನದಲ್ಲಿ ಸರಿಯಾಗಿಯೇ ಬರೆಯಲಾಗಿದೆ ಎಂದು ಹೇಳಿ ಕಾಂಗ್ರೆಸ್ ಭಾಗವತ್ ಅವರಿಗೆ ಉತ್ತರಿಸಿದೆ.
ನಮ್ಮ ಸರ್ಕಾರ ಎಸ್‌ಸಿ, ಎಸ್ಟಿ, ಹಿಂದುಳಿದ ಜಾತಿಯವರಿಗೆ ನೀಡಿರುವ ಮೀಸಲಾತಿ ಬಗ್ಗೆ ಯಾವುದೇ ರೀತಿಯ ಬದಲಾವಣೆಗಳನ್ನು ಮಾಡುವುದಿಲ್ಲ. ಈ ಮೀಸಲಾತಿ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಅಗತ್ಯವಾಗಿದೆ ಎಂದು ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಕೇಂದ್ರ ಸಚಿವರು ಮೀಸಲಾತಿ ನೀತಿ ಪುನರ್‌ಪರಿಶೀಲನೆ ಮಾಡುವ ಅಗತ್ಯವಿಲ್ಲ ಎಂದು ಒತ್ತಿ ಹೇಳಿದ್ದಾರೆ.
ಆದಾಗ್ಯೂ, ಕೇಂದ್ರ ಸರ್ಕಾರ ಮೀಸಲಾತಿ ನೀತಿಯಲ್ಲಿ ತಿದ್ದುಪಡಿ ಮಾಡಿದರೆ ಅದಕ್ಕೆ ತಕ್ಕ ಬೆಲೆ ತೆರಬೇಕಾದೀತು ಎಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಎಚ್ಚರಿಕೆ ನೀಡಿದ್ದಾರೆ.
SCROLL FOR NEXT