ನವದೆಹಲಿ: ಬಿಹಾರ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರೀಯ ನಾಯಕರುಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರನ್ನು ಹೊಗಳಿ ಬಿಜೆಪಿ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದ್ದ ಸಂಸದ ಶತ್ರುಘ್ನ ಸಿನ್ಹಾ ಕೂಡ ಕ್ಯಾಂಪೇನರ್ಸ್ ಪಟ್ಟಿಯಲ್ಲಿದ್ದಾರೆ.
ಶತೃಘ್ನ ಸಿನ್ಹಾ ಸೇರಿದಂತೆ ಲಾಲ್ ಕೃಷ್ಣ ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಎಲ್.ಕೆ ಅಡ್ವಾಣಿ ಅವರನ್ನು ಬಿಹಾರ ಚುನಾವಣೆ ಪ್ರಚಾರದಲ್ಲಿ ಪಾಲ್ಗೋಳ್ಳಲು ತಿಳಿಸಲಾಗಿದೆ. ಚುನಾವಣೆಯಲ್ಲಿ ಯಾವುದೇ ರೀತಿಯ ವಿವಾದಗಳು ಬಾರದಿರಲಿ ಎಂಬ ಉದ್ದೇಶದಿಂದ ಹಿರಿಯ ನಾಯಕರುಗಳನ್ನು ಪ್ರಚಾರಕ್ಕೆ ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಬಿಜೆಪಿ ತನ್ನ ಪಕ್ಷದಿಂದ ಬಿಹಾರ ಚುನಾವಣೆಯಲ್ಲಿ ಪಾಲ್ಗೊಳ್ಳುವ ಸುಮಾರು 40 ನಾಯಕರ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ರವಾನಿಸಿದೆ. ಅದರಲ್ಲಿ 20 ರಾಜ್ಯ ನಾಯಕರು ಇನ್ನು 20 ಕೇಂದ್ರ ಬಿಜೆಪಿ ನಾಯಕರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಬಿಹಾರ ಚುನಾವಣೆಯ ಸ್ಟಾರ್ ಪ್ರಚಾರಕರಾಗಿದ್ದು ಈಗಾಗಲೇ ಬಿಹಾರದ್ಯಂತ 5 ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ.
ಕೇಂದ್ರ ಸಚಿವರುಗಳಾದ ಸುಷ್ಮಾ ಸ್ವರಾಜ್, ಅರುಣ್ ಜೈಟ್ಲಿ, ಸ್ಮೃತಿ ಇರಾನಿ, ರಾಜನಾಥ್ ಸಿಂಗ್, ಅಮಿತ್ ಶಾ, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಬಿಹಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.