ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಜೆಡಿಯು, ಆರ್‌ಜೆಡಿ ಹಾಗೂ ಕಾಂಗ್ರೆಸ್ ಮಹಾ ಮೈತ್ರಿಕೂಟದ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಪ್ರಕಟಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು, ಟಿಕೆಟ್ ಹಂಚಿಕೆಯಲ್ಲಿ ಎಲ್ಲಾ ಸಮುದಾಯಕ್ಕೂ ಪ್ರಾತಿನಿದ್ಯ ನೀಡಲಾಗಿದೆ ಎಂದರು.
ಶೇ.55ರಷ್ಟು ಹಿಂದುಳಿದ ವರ್ಗಗಳಿಗೆ, ಶೇ. 16ರಷ್ಟು ಸಾಮಾನ್ಯ ವರ್ಗದವರಿಗೆ ಹಾಗೂ ಶೇ.14ರಷ್ಟು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲಾಗಿದೆ ಎಂದು ನಿತಿಶ್ ಕುಮಾರ್ ತಿಳಿಸಿದರು.
ಮಹಾ ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದ ಬಿಹಾರ ಸಿಎಂ, ಬಿಜೆಪಿಗೆ ಆರ್‌ಎಸ್‌ಎಸ್ ಸುಪ್ರೀಂ ಕೋರ್ಟ್ ಇದ್ದಂತೆ ಎಂದು ವ್ಯಂಗ್ಯವಾಡಿದರು.
ಐದು ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅಕ್ಟೋಬರ್ 12ರಂದು ಮೊದಲ ಹಂತ ಹಾಗೂ ನವೆಂಬರ್ 5ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ನವೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.