ಹಾರ್ದಿಕ್ ಪಟೇಲ್ 
ದೇಶ

ನಾಪತ್ತೆಯಾಗಿರುವ ಹಾರ್ದಿಕ್ ಪಟೇಲ್ ರನ್ನು ಗುರುವಾರದೊಳಗೆ ಹಾಜರುಪಡಿಸಿ: ಗುಜರಾತ್ ಹೈಕೋರ್ಟ್

ನಾಪತ್ತೆಯಾಗಿರುವ ಹಾರ್ದಿಕ್ ಪಟೇಲ್ ಅವರನ್ನು ಗುರುವಾರದೊಳಗೆ ಕಡ್ಡಾಯವಾಗಿ ನ್ಯಾಯಲಯಕ್ಕೆ ಹಾಜರುಪಡಿಸಬೇಕೆಂದು .....

ಅಹಮದಾಬಾದ್: ಪಟೇಲ್ ಸಮುದಾಯದ ಮಿಸಲಾತಿಗಾಗಿ ಹೋರಾಟ ನಡೆಸುತ್ತಿರುವ ಹಾರ್ದಿಕ್ ಪಟೇಲ್ ಅವರನ್ನು ಗುರುವಾರದೊಳಗೆ ಕಡ್ಡಾಯವಾಗಿ ನ್ಯಾಯಲಯಕ್ಕೆ ಹಾಜರುಪಡಿಸಬೇಕೆಂದು ಬಿಜೆಪಿ ಸರ್ಕಾರಕ್ಕೆ ಗುಜರಾತ್ ಹೈಕೋರ್ಟ್ ಆದೇಶಿಸಿದೆ.

ಹಾರ್ದಿಕ್ ಪಟೇಲ್ ಅವರನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಹಾರ್ದಿಕ್ ಪಟೇಲ್ ಪರ ವಕೀಲರು ನಿನ್ನೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮುಂಜಾನೆ 2.30ರಲ್ಲಿ ಈ ಆದೇಶ ನೀಡಿದೆ.

ಪಟೇಲ್ ಸಮುದಾಯದ ಮೀಸಲಾತಿ ಪರ ಹೋರಾಟ ನಡೆಸುತ್ತಿರುವ ಹಾರ್ದಿಕ್ ಪಟೇಲ್ ಮತ್ತವರ  ಬೆಂಬಲಿಗರಿಗೆ ರಾಜ್ಯ ಸರ್ಕಾರದಿಂದ ಬೆದರಿಕೆ ಬರುತ್ತಿದೆ. ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಕೈ ಬಿಡಲು ಒತ್ತಡ ಹೇರಲಾಗುತ್ತಿದೆ. ಹೀಗಾಗಿ ನಾಪತ್ತೆಯಾಗಿರುವ ಹಾರ್ದಿಕ್ ಪಟೇಲ್ ಅವರನ್ನು ಹುಡುಕಿ ಕೊಡಬೇಕು ಎಂದು ಪಟೇಲ್ ಪರ ವಕೀಲರು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಮಧ್ಯ ರಾತ್ರಿ ನ್ಯಾಯಾದೀಶರ ಮನೆಯಲ್ಲಿ  ಮಧ್ಯ ರಾತ್ರಿ ವಿಚಾರಣೆ ನಡೆಸಿದ ಜಡ್ಜ್ ಈ ಆದೇಶ ನೀಡಿದ್ದಾರೆ.

ಗುಜರಾತಿನ ಅರವಳ್ಳಿ ಗ್ರಾಮದಲ್ಲಿ ಯಾವುದೇ ಅನುಮತಿ ಪಡೆಯದೇ ಹಾರ್ದಿಕ್ ಪಟೇಲ್ ಸಭೆ ನಡೆಸುತ್ತಿದ್ದರು. ಈ ವೇಳೆ ಅವರನ್ನು ಬಂಧಿಸಲು ಹೊರಟಾಗ ವಾಹನದಲ್ಲಿ ಪರಾರಿಯಾಗಲು ಈ ವೇಳೆ ಹಾರ್ದಿಕ್ ಪಟೇಲರನ್ನು ಬಂಧಿಸಿದ್ದಾಗಿ ನ್ಯಾಯಾಲಯದ ಮುಂದೆ ಗುಜರಾತ್ ಪೊಲೀಸರು ಹೇಳಿಕೆ ನೀಡಿದ್ದಾರೆ. ಇನ್ನು ಗ್ರಾಮವೊಂದರಲ್ಲಿ ಅನುಮತಿ ಪಡೆಯದೇ ಸಭೆ ಏರ್ಪಡಿಸಿದ್ದ ಹಿನ್ನೆಲೆಯಲ್ಲಿ ಹಾರ್ದಿಕ್ ಪಟೇಲ್ ವಿರುದ್ಧ 13 ಮೊಕದ್ದಮೆಗಳನ್ನು ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT