ಶಾರ್ಕ್ ದಾಳಿಗಿಂತ ಸೆಲ್ಫೀ ಹುಚ್ಚಿಗೆ ಬಲಿಯಾದವರು ಹೆಚ್ಚು
ಕಳೆದ ವರ್ಷ ಶಾರ್ಕ್ ದಾಳಿಗಿಂತ ಸೆಲ್ಫೀ ತೆಗೆದುಕೊಳ್ಳಲು ಹೋಗಿ ಹೆಚ್ಚು ಸಾವನ್ನಪ್ಪಿದ್ದಾರೆ ಎಂದು ವರದಿಯೊಂದು ತಿಳಿಸಿದೆ...
ಕಳೆದ ವರ್ಷ ಶಾರ್ಕ್ ದಾಳಿಗಿಂತ ಸೆಲ್ಫೀ ತೆಗೆದುಕೊಳ್ಳಲು ಹೋಗಿ ಹೆಚ್ಚು ಸಾವನ್ನಪ್ಪಿದ್ದಾರೆ ಎಂದು ವರದಿಯೊಂದು ತಿಳಿಸಿದೆ.
ಸೆಲ್ಫೀ ತೆಗೆದುಕೊಳ್ಳಲು ಹೋಗಿ ಸುಮಾರು 12 ಜನ ತಮ್ಮ ಜೀವ ಕಳೆದುಕೊಂಡಿದ್ದಾರೆ. ಆದರೆ ಶಾರ್ಕ್ ಗೆ ದಾಳಿಯಿಂದ 8 ಮಂದಿ ಮೃತ ಪಟ್ಟಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.
ಇತ್ತೀಚೆಗೆ 55 ವರ್ಷದ ಜಪಾನ್ ಪ್ರಜೆಯೊಬ್ಬ ತಾಜ್ ಮಹಲ್ ಗೆ ಭೇಟಿ ನೀಡಿ ಅಲ್ಲಿ ಸೆಲ್ಫೀ ತೆಗೆದುಕೊಳ್ಳಲು ಹೋಗಿ ಕೆಳಗೆ ಬಿದ್ದು ಸಾವನ್ಪಪ್ಪಿರುವುದಾಗಿ ಪತ್ರಿಕೆ ತಿಳಿಸಿದೆ.
ಇನ್ನು ಮಿಸಿಸಿಪ್ಪಿಯ ಮಹಿಳೆಯೊಬ್ಬಳು ಯೆಲ್ಲೋ ಸ್ಟೋನ್ ನ್ಯಾಷನಲ್ ಪಾರ್ಕಿನಲ್ಲಿ ಪ್ರಾಣಿಗಳ ಹತ್ತಿರದಿಂದ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಡೆಮ್ಮೆಗೆ ಬಲಿಯಾಗಿರುವ ವರದಿಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.