ಕಲಬುರ್ಗಿ ಹತ್ಯಾ ಪ್ರಕರಣದ ತನಿಖೆ (ಸಂಗ್ರಹ ಚಿತ್ರ) 
ದೇಶ

ವಿಜಯಪುರಕ್ಕೆ ಸಿಐಡಿ ತಂಡ

ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ವಿಶೇಷ ತಂಡ ನಗರಕ್ಕೆ ಆಗಮಿಸಿ ಹಿಂದು ಸಂಘಟನೆಗಳ ಮೂವರು ಕಾರ್ಯಕರ್ತರನ್ನು ವಿಚಾರಣೆಗೆ ಒಳಪಡಿಸಿದೆ...

ವಿಜಯಪುರ: ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ವಿಶೇಷ ತಂಡ ನಗರಕ್ಕೆ ಆಗಮಿಸಿ ಹಿಂದು ಸಂಘಟನೆಗಳ ಮೂವರು ಕಾರ್ಯಕರ್ತರನ್ನು ವಿಚಾರಣೆಗೆ ಒಳಪಡಿಸಿದೆ.

ಸಿಐಡಿ ತಂಡ ಸೋಮವಾರವೇ ನಗರಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದೆ. ಕಲಬುರ್ಗಿ ವಿಜಯಪುರ ಜಿಲ್ಲೆಯವರಾಗಿದ್ದರಿಂದಾಗಿ ತಂಡ ವಿಚಾರಣೆಗೆ ಇಲ್ಲಿಗೆ ಆಗಮಿಸಿದೆ. ಈಗ ಮೂವರು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಸೋಮವಾರ ಐದು ಗಂಟೆ ಕಾಲ ನಿರಂತರವಾಗಿ ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿಚಾರಣೆಗೆ ಮನವಿ: ಸಮರ್ಥನೆ
ಧಾರವಾಡ:
ಡಾ. ಎಂ.ಎಂ. ಕಲಬುರ್ಗಿ ಹತ್ಯೆ ಕುರಿತು ಸೆ. 14ರಂದು ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯ ಹಕ್ಕೊತ್ತಾಯಗಳಲ್ಲಿ ಶ್ರೀರಾಮ ಸೇನೆಯನ್ನೊಳಗೊಂಡು ಮತೀಯ ಸಂಘಟನೆಗಳನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಹೇಳಿರುವುದು ಆ ಸಂಘಟನೆಗಳ ಬಗ್ಗೆ ಹುಟ್ಟಿ ಕೊಂಡಿರುವ ಅನುಮಾನಗಳೇ ಕಾರಣ ಎಂದು `ಕಲಬುರ್ಗಿ ಹತ್ಯಾ ವಿರೋಧಿ ಹೋರಾಟ ವೇದಿಕೆ' ಸ್ಪಷ್ಟಪಡಿಸಿದೆ.

ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ವೇದಿಕೆ, ವಿಚಾರಣೆ ಮಾಡಿದ ಮಾತ್ರಕ್ಕೆ ಯಾರೂ ಅಪರಾಧಿಗಳಾಗುವುದಿಲ್ಲ. ಆದರೆ, ಮತೀಯ ಸಾಮರಸ್ಯ ಕದಡುವ, ಹಲ್ಲೆ ಮಾಡುವ ಪ್ರಕರಣಗಳಲ್ಲಿ ಇದೇ ಸಂಘಟನೆಯ ಕಾರ್ಯಕರ್ತರ ಪಾತ್ರವಿರುವುದನ್ನು ರಾಜ್ಯ ಹಲವು ಠಾಣೆಗಳಲ್ಲಿ ದೂರು ದಾಖಲಾಗಿವೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT