ಪ್ರಧಾನಿಗೆ ಗ್ರೀನ್ ಪೀಸ್ ದೂರು
ಜಾಗತಿಕ ಮಟ್ಟದಲ್ಲಿ ದೇಶದ ವರ್ಚಸ್ಸನ್ನು ಹಾಳು ಮಾಡುತ್ತಿರುವುದು ಕೇಂದ್ರ ಗೃಹ ಸಚಿವಾಲಯ! ಹೀಗಂತ ಗ್ರೀನ್ ಪೀಸ್ ಎನ್ಜಿಓ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ನೀಡಿದೆ...
ನವದೆಹಲಿ: ಜಾಗತಿಕ ಮಟ್ಟದಲ್ಲಿ ದೇಶದ ವರ್ಚಸ್ಸನ್ನು ಹಾಳು ಮಾಡುತ್ತಿರುವುದು ಕೇಂದ್ರ ಗೃಹ ಸಚಿವಾಲಯ! ಹೀಗಂತ ಗ್ರೀನ್ ಪೀಸ್ ಎನ್ಜಿಓ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ನೀಡಿದೆ.
ಗೃಹ ಸಚಿವಾಲಯವು ಗ್ರೀನ್ ಪೀಸ್ ಎನ್ಜಿಓ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದು, ಇದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದೆ. ತಮ್ಮ ಎನ್ಜಿಓ ವಿರುದ್ಧ ನಡೆಸುತ್ತಿರುವ ಅಪಪ್ರಚಾರದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವಕ್ಕೆ ಹಾನಿಯಾಗುತ್ತಿದೆ ಎಂದು ಹೇಳಿದೆ. ಭಾರತ ಮತ್ತು ಅಮೆರಿಕದಲ್ಲಿರುವ ಗ್ರೀನ್ ಪೀಸ್ನ ನಿರ್ದೇಶಕರು ಮೋದಿಗೆ ಈ ಸಂಬಂಧ ಬಹಿರಂಗ ಪತ್ರ ಬರೆದಿದ್ದಾರೆ. ಗ್ರೀನ್ ಪೀಸ್ ವಿರುದ್ಧದ ಕೇಂದ್ರದ ಕ್ರಮಗಳು ಪ್ರಶ್ನಾರ್ಥಕವಾಗಿವೆ ಎಂದೂ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.