ಸುಬ್ರಹ್ಮಣ್ಯನ್‌ ಸ್ವಾಮಿ 
ದೇಶ

ನೆಹರೂ 'ಥರ್ಡ್‌ ಕ್ಲಾಸ್‌ ಪಾಸ್‌', ಜೆಎನ್‌ಯು ವಿದ್ಯಾರ್ಥಿಗಳು,ಪ್ರಾಧ್ಯಾಪಕರು 'ನಕ್ಸಲರು': ಸುಬ್ರಹ್ಮಣ್ಯನ್‌ ಸ್ವಾಮಿ

ಬಿಜೆಪಿ ನಾಯಕ ಸುಬ್ರಹ್ಮಣ್ಯನ್‌ ಸ್ವಾಮಿ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಪಂಡಿತ್‌ ಜವಾಹರಲಾಲ್‌...

ನವದೆಹಲಿ: ಬಿಜೆಪಿ ನಾಯಕ ಸುಬ್ರಹ್ಮಣ್ಯನ್‌ ಸ್ವಾಮಿ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಪಂಡಿತ್‌ ಜವಾಹರಲಾಲ್‌ ನೆಹರೂ ಅವರು ಥರ್ಡ್‌ ಕ್ಲಾಸ್‌ ಪಾಸ್‌' ಎಂದಿದ್ದ ಸ್ವಾಮಿ, ಈಗ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರನ್ನು ನಕ್ಸಲರು ಎಂದಿದ್ದಾರೆ.

'ವಿದ್ಯಾರ್ಥಿಗಳು ಮಾತ್ರ ಅಲ್ಲ, ಜೆಎನ್ ಯು ಪ್ರಾಧ್ಯಾಪಕರನ್ನು ನಾನು ನಕ್ಸಲರು' ಎಂದು ಕರೆಯುವುದಾಗಿ ಸ್ವಾಮಿ ವರದಿಗಾರರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.

ದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯಕ್ಕೆ ಸುಭಾಶ್ಚಂದ್ರ ಬೋಸ್‌ ಅವರ ಹೆಸರನ್ನು ಇಡಬೇಕೆಂದು ಶಿಫಾರಸು ಮಾಡಿದ್ದೇವೆ. ಕಾರಣ ಬೋಸ್‌ ಒಬ್ಬ ಅತ್ಯುನ್ನತ ಶಿಕ್ಷಣ ಪಡೆದ ಸಾಧಕ; ಆದರೆ ನೆಹರೂ ಒಬ್ಬ ಥರ್ಡ್‌ ಕ್ಲಾಸ್‌ ಪಾಸ್‌ ವ್ಯಕ್ತಿ' ಎಂದು ಸ್ವಾಮಿ ಹೇಳಿದ್ದಾರೆ.

ವರದಿಗಳ ಪ್ರಕಾರ, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಸ್ವಾಮಿ ಅವರಿಗೆ ಜೆಎನ್‌ಯು ಕುಲಪತಿ ಹುದ್ದೆ ನೀಡುವ ಸಾಧ್ಯತೆ ಇದೆ. ಆದರೆ ಸ್ವಾಮಿ ಅವರು ಈ ಹುದ್ದೆ ವಹಿಸಿಕೊಳ್ಳಲು ಕೆಲವು ಶರತ್ತುಗಳನ್ನು ಹಾಕಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!