ಸುಭಾಷ್ ಚಂದ್ರ ಬೋಸ್ ಮತ್ತು ಅನಿತಾ ಬೋಸ್ 
ದೇಶ

ನನ್ನ ತಂದೆಯ ಕುರಿತ ದಾಖಲೆ ಬಿಡುಗಡೆ ಮಾಡಿ: ಅನಿತಾ ಬೋಸ್

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಾವಿನ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಅವರ...

ಕೋಲ್ಕತ್ತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಾವಿನ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಅವರ ಪುತ್ರಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ನೇತಾಜಿ ಅವರು ಅದೃಶ್ಯವಾಗಿ 70 ವರ್ಷಗಳೇ ಕಳೆದಿವೆ. ಇತ್ತೀಚೆಗೆ ಪಶ್ಚಿಮ ಬಂಗಾಲ ಸರ್ಕಾರ ಅವರ ಅಂತಿಮ ದಿನಗಳು ಮತ್ತು ಸಾವಿನ ಕುರಿತ 64 ದಾಖಲೆಗಳನ್ನು ಬಿಡುಗಡೆ ಮಾಡಿದೆ. ಆ ದಾಖಲೆಗಳ ಪ್ರತಿಗಳು ನನಗೆ ಸಿಗಬೇಕಿದೆ. ಆದುದರಿಂದ ಅದರಲ್ಲಿನ ಮಾಹಿತಿಗಳ ಬಗ್ಗೆ ನನಗೆ ಅರಿವಿಲ್ಲ ಎಂದು ಸುಭಾಷ್ ಚಂದ್ರ ಬೋಸ್ ಅವರ ಮಗಳು 72 ವರ್ಷದ ಅನಿತಾ ಬೋಸ್ ಒತ್ತಾಯಿಸಿದ್ದಾರೆ.

ಮೂವತ್ತು ವರ್ಷಕ್ಕಿಂತ ಹಳೆಯ ದಾಖಲೆಗಳನ್ನು ರಹಸ್ಯವಾಗಿಟ್ಟುಕೊಳ್ಳದೆ ಬಿಡುಗಡೆ ಮಾಡಬೇಕೆಂಬ ನಿಯಮವಿದೆ. ಸಾರ್ವಜನಿಕರಿಗೆ ವಿಷಯ ಗೊತ್ತಾಗಬೇಕು. ನನ್ನ ತಂದೆಯವರಿಗೆ ಸಂಬಂಧಪಟ್ಟ ದಾಖಲೆಗಳಿಗೂ ಇದು ಅನ್ವಯವಾಗುತ್ತದೆ ಎಂದು ಅನಿತಾ ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಇ-ಮೇಲ್ ಸಂದರ್ಶನದಲ್ಲಿ ಹೇಳಿದ್ದಾರೆ.
ಇಂಗ್ಲೆಂಡ್, ರಷ್ಯಾ ಮತ್ತು ಜಪಾನ್ ಸರ್ಕಾರದ ಬಳಿ ಇರುವ ನೇತಾಜಿಯವರಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಿಡುಗಡೆ ಮಾಡಲು ಮನವಿ ಮಾಡಿಕೊಳ್ಳುವಿರೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಭಾರತ ಸರ್ಕಾರ ಈ ಕುರಿತು ಅಲ್ಲಿನ ಸರ್ಕಾರಗಳಿಗೆ ಮನವಿ ಸಲ್ಲಿಸಿದರೆ ಉತ್ತಮ. ಕೆಲವು ರಾಷ್ಟ್ರಗಳಲ್ಲಿ ಮಾಹಿತಿ ಹಕ್ಕು ಕಾಯ್ದೆಗಳಿವೆ. ಆದರೆ ಭಾರತ ಸರ್ಕಾರವೇ ನೇತಾಜಿಯವರ ದಾಖಲೆಗಳನ್ನು ಬಿಡುಗಡೆ ಮಾಡದಿದ್ದರೆ ಬೇರೆ ಸರ್ಕಾರದೊಂದಿಗೆ ಕೇಳುವ ಪರಿಸ್ಥಿತಿಯಲ್ಲಿ ಅದು ಇರುವುದಿಲ್ಲ ಎಂದು ಹೇಳಿದ್ದಾರೆ.

ಜರ್ಮನಿಯಲ್ಲಿ ನೆಲೆಸಿರುವ ಖ್ಯಾತ ಅರ್ಥಶಾಸ್ತ್ರಜ್ಞೆಯಾಗಿರುವ ಅನಿತಾ ಬೋಸ್, ನೇತಾಜಿಯವರು ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿಯ ಬಗ್ಗೆ ಅನುಮಾನ ಇಂದಿಗೂ ಜನರಲ್ಲಿದ್ದು, ಜಪಾನ್ ನ ರೆಂಕೋಜಿ ದೇವಸ್ಥಾನದಲ್ಲಿ ಸಂಗ್ರಹಿಸಿಟ್ಟಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರದ್ದು ಎಂದು ಹೇಳಲಾಗುವ ಬೂದಿಯನ್ನು ಡಿಎನ್ ಎ ಪರೀಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಆ ಬೂದಿಯು ತನಿಖೆಗೆ ಪ್ರಮುಖ ಸಾಕ್ಷ್ಯಾಧಾರ ಒದಗಿಸಲಿದೆ ಎಂದು ಅನಿತಾ ಅಭಿಪ್ರಾಯಪಟ್ಟಿದ್ದಾರೆ.
ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ನೇತಾಜಿ ಅವರು ಮತ್ತು ಅವರು ಸ್ಥಾಪಿಸಿದ್ದ ಭಾರತೀಯ ರಾಷ್ಟ್ರೀಯ ಸೇನೆ ದೇಶಕ್ಕೆ ನೀಡಿದ ಕೊಡುಗೆಳನ್ನು ನಿರ್ಲಕ್ಷಿಸಿತ್ತು. ಮುಖರ್ಜಿ ಆಯೋಗವೂ ಕೂಡ ತನಿಖೆಗೆ ಅಧಿಕ ಸಮಯ ತೆಗೆದುಕೊಳ್ಳುತ್ತದೆ ಎಂದು ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಲ ಸರ್ಕಾರ, ಬೋಸ್ ಕುಟುಂಬ ಮತ್ತು ಇನ್ನೂ ಹಲವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT