ಲಖನೌ: ಆರ್ ಕೆ ಸಿಂಗ್ ಆರೋಪದಿಂದ ಗರಂ ಆಗಿರುವ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ರಾಜ್‍ನಾಥ್ ಸಿಂಗ್, ಬಿಜೆಪಿಯಲ್ಲಿ ಎಲ್ಲಾ ಅಂಶಗಳನ್ನು ಪರಿಗಣಿಸಿಯೇ ಪಕ್ಷದ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ ಎನ್ನುವ ಮೂಲಕ ಹಣಕ್ಕಾಗಿ ಟಿಕೆಟ್ ಮಾರಲಾಗಿದೆ ಎಂಬ ಆರೋಪಗಳನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.
ಲಖನೌದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಟಿಕೆಟ್ ಹಂಚಿಕೆ ವಿಷಯದಲ್ಲಿ ಯಾವುದೇ ಆರೋಪಗಳಲ್ಲಿ ಹುರುಳಿಲ್ಲ.
ಅಲ್ಲದೆ ಪಕ್ಷಕ್ಕೆ ಬಿಹಾರದಲ್ಲಿ ಭಾರೀ ಜನ ಬೆಂಬಲ ವ್ಯಕ್ತವಾಗುತ್ತಿದ್ದು, ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.