ನವದೆಹಲಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತೆ ನಾಪತ್ತೆಯಾಗಿದ್ದಾರೆಂದು ಬಿಜೆಪಿ ಮಾಡುತ್ತಿದ್ದ ಆರೋಪಕ್ಕೆ ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ಉತ್ತರಿಸಿದ್ದಾರೆ.
ಅಮೆರಿಕಾದ ಆಸ್ಪೆನ್ ನಲ್ಲಿ ನಡೆಯುತ್ತಿರುವ ಜಾಗತಿಕ ಆರ್ಥಿಕ ಮತ್ತು ತಂತ್ರಜ್ಞಾನ ಕುರಿತ ಆಸಕ್ತಿದಾಯಕ ಚರ್ಚೆಯಲ್ಲಿ ತಾವು ಭಾಗವಹಿಸಿರುವುದಾಗಿ ಹೇಳಿರುವ ರಾಹುಲ್, ತಾವು ಸಮ್ಮೇಳನದಲ್ಲಿ ಭಾಗವಹಿಸಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.
ಅಮೆರಿಕಾದ ಆಸ್ಪೇನ್ ನಲ್ಲಿ ನಡೆಯುವ ಸಮ್ಮೇಳನದಲ್ಲಿ ಭಾಗವಹಿಸಿ ಜಗತ್ತಿನ ಪ್ರಮುಖ ನಾಯಕರನ್ನು ಭೇಟಿ ಮಾಡಿ, ರಾಜಕೀಯ, ಹಣಕಾಸು, ತಂತ್ರಜ್ಞಾನ, ಮಾಧ್ಯಮ, ಔಷಧ, ಕ್ರೀಡೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸುವಂತೆ ರಾಹುಲ್ ಗಾಂಧಿ ಅವರ ಮೇಲೆ ಒತ್ತಡ ಹೇರಿ ಅಮೆರಿಕಾಗೆ ಕಳುಹಿಸಿದ್ದರು.
.