ಸುಲ್ತಾನ್‌ಪುರ: ಉತ್ತರ ಪ್ರದೇಶದ ಗೋಸಾಯಿಗಂಜ್ ಪ್ರದೇಶದಲ್ಲಿರುವ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸ್ಫೋಟ ಸಂಭವಿಸಿ ಓರ್ವ ಮಹಿಳೆ ಹಾಗೂ ಬಾಲಕಿ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಮೃತರನ್ನು ಅಲೀಮುದ್ದೀನ್ (60), ಅನ್ವರಿ(55), ಗುಡಿಯಾ(25) ಹಾಗೂ ಖುಷ್‌ಬೂ(13) ಎಂದು ಗುರುತಿಸಲಾಗಿದೆ.
ಕಾರ್ಖಾನೆಯಲ್ಲಿ ಪಟಾಕಿಗಳನ್ನು ತಯಾರಿಸುತ್ತಿದ್ದ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ನಾಲ್ವರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಈ ದುರ್ಘಟನೆಯಲ್ಲಿ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಪಟಾಕಿ ತಯಾರಿಸಲಾಗುತ್ತಿದ್ದ ಮನೆಯು ಸಂಪೂರ್ಣವಾಗಿ ಧ್ವಂಸವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.