ದೇಶ

ರಾಹುಲ್ 10ಕ್ಕೂ ಹೆಚ್ಚು ರ್ಯಾಲಿ

ಪಟನಾ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮುಂದಿನ ತಿಂಗಳಿಂದ ಬಿಹಾರ ಚುನಾವಣಾ ಅಖಾಡಕ್ಕೆ ಮರಳಲಿದ್ದಾರೆ. ರಾಜ್ಯಾದ್ಯಂತ 10ಕ್ಕೂ ಹೆಚ್ಚು ರ್ಯಾಲಿಗಳನ್ನುದ್ದೇಶಿಸಿ ರಾಹುಲ್ ಮಾತನಾಡಲಿದ್ದಾರೆ.

ಅಲ್ಪಸಂಖ್ಯಾತ ಮತದಾರರನ್ನು ಗಮನದಲ್ಲಿಟ್ಟುಕೊಂಡು ರಾಹುಲ್ ಸೀಮಾಂಚಲದಲ್ಲಿ 2 ರ್ಯಾಲಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈಗಾಗಲೇ ರಾಹುಲ್ 9 ರ್ಯಾಲಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ರ್ಯಾಲಿಗಳ ಸಂಖ್ಯೆ 14 ದಾಟಿದರೂ ಅಚ್ಚರಿ ಇಲ್ಲ. ಸೋನಿಯಾ ನಾಲ್ಕು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆ ಇದೆ.

SCROLL FOR NEXT