ದೇಶೀಯ ಹಸು 
ದೇಶ

ದೇಶೀಯ ಹಸುಗಳ ಹತ್ಯೆಗೆ ನಿಷೇಧ:ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಿಂದ ಕೇಂದ್ರಕ್ಕೆ ನೊಟೀಸ್

ದೇಶೀಯ ಹಸುಗಳನ್ನು ಹತ್ಯೆ ನಿಷೇಧ ವಿಧಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.

ನವದೆಹಲಿ:ದೇಶೀಯ ಹಸುಗಳನ್ನು ಹತ್ಯೆ ನಿಷೇಧ ವಿಧಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ(ಎನ್.ಜಿ.ಟಿ) ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.
ನ್ಯಾ.ಯು.ಡಿ ಸಾಳ್ವಿ ಕೃಷಿ ಸಚಿವಾಲಯಕ್ಕೆ ನೊಟೀಸ್ ಜಾರಿ ಮಾಡಿದ್ದು ದೇಶಿ ಹಸುಗಳ ಹತ್ಯೆಗೆ ನಿಷೇಧ ವಿಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅ.30 ರೊಳಗೆ ಪ್ರತಿಕ್ರಿಯೆ ನೀಡಬೇಕೆಂದು ಸೂಚನೆ ನೀಡಿದೆ.
 ಪರಿಸರವಾದಿಯೂ ಆಗಿರುವ ನ್ಯಾಯವಾದಿ ಅಶ್ವಿನಿ ಕುಮಾರ್ ಅವರು ದೇಶಿ ಹಸುಗಳ ಹತ್ಯೆಗೆ ದೇಶಾದ್ಯಂತ ನಿಷೇಧ ವಿಧಿಸಬೇಕೆಂದು ಕೋರಿ ಹಸಿರು ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸಿದ್ದರು.
ದೇಶಾದ್ಯಂತ ಸ್ಥಳೀಯ ಗೋವುಗಳ ಸಂತತಿ ಕಡಿಮೆಯಾಗುತ್ತಿದ್ದು, ದೇಶಿ ಹಸುಗಳ ಬದಲಿಗೆ ಹೈಬ್ರೀಡ್ ಹಸುಗಳನ್ನು ಬೆಳೆಸಲಾಗುತ್ತದೆ. ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳು ಜಾನುವಾರುಗಳ ವೈವಿಧ್ಯತೆ ಸಂರಕ್ಷಿಸಲು ಕ್ರಮ ಕೈಗೊಳ್ಳುತ್ತಿವೆ. ಆದರೆ ಭಾರತದಲ್ಲಿ ಸ್ಥಳೀಯ ಹಸುಗಳ ಸಂತತಿ ಅಳಿವಿನ ಅಂಚಿನಲ್ಲಿದ್ದು ಕೇಂದ್ರ, ರಾಜ್ಯ ಸರ್ಕಾರಗಳು ಮೂಕಪ್ರೇಕ್ಷಕನಂತೆ ವರ್ತಿಸುತ್ತಿವೆ ಎಂದು ಅಶ್ವಿನಿ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಗೋಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಹೈಕೋರ್ಟ್ ನೀಡಿರುವ ಆದೇಶದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?