100 ಕೋಟಿ ದಾಟುತ್ತಿದೆ ಆಧಾರ್ ನೋಂದಣಿ ಕಾರ್ಯ, ಸರ್ಕಾರಿ ಯೋಜನೆಗಳಿಗೆ ಉತ್ತೇಜನ
ಆಧಾರ್ ನೋಂದಣಿ 100 ಕೋಟಿ ತಲುಪುತ್ತಿದ್ದು, ಆ ಮೂಲಕ ಕೇಂದ್ರದ ಯೋಜನೆಗಳಿಗೆ ಉತ್ತೇಜನ ನೀಡಲು ಮುಂದಾಗಿದೆ. ..
ನವದೆಹಲಿ: ಮುಂದಿನ ದಿನಗಳಲ್ಲಿ ಆಧಾರ್ ನೋಂದಣಿ 100 ಕೋಟಿ ತಲುಪುತ್ತಿದ್ದು, ಆ ಮೂಲಕ ಕೇಂದ್ರದ ಯೋಜನೆಗಳಿಗೆ ಉತ್ತೇಜನ ನೀಡಲು ಮುಂದಾಗಿದೆ. ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡಿರುವ ಸರ್ಕಾರ ಸಾಮಾಜಿಕ ವಲಯಗಳಲ್ಲಿ ಯೋಜನೆಯ ಉಪಯೋಗ ಪಡೆಯುವಂತೆ ಅನುಕೂಲ ಮಾಡಿಕೊಡಲು ಮುಂದಾಗಿದೆ.
ಭಾರತೀಯ ವಿಶೇಷ ಗುರುತು ಪ್ರಾಧಿಕಾರ ಆಧಾರ್ ಯೋಜನೆ ಅನುಷ್ಠಾನಗೊಳಿಸಲು ಮುಂದಾಗಿದ್ದು 99.91 ಕೋಟಿ ಸಂಖ್ಯೆಯ ಆಧಾರ್ ನೋಂದಣಿಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಆಧಾರ್ ನೋಂದಣಿ 100 ಕೋಟಿ ತಲುಪಲಿದೆ.
ಆಧಾರ್ ಮಸೂದೆಯನ್ನು ಸಂಸತ್ತಿನ ಎರಡು ಸದನಗಳಲ್ಲೂ ಅಂಗೀಕರಿಸಿದ್ದು, ಭಾರತೀಯ ವಿಶೇಷ ಗುರುತು ಪ್ರಾಧಿಕಾರ ತನ್ನ ವೆಬ್ ಸೈಟ್ ನಲ್ಲಿ ನೋಂದಣಿಯಾಗಿರುವ ಸಂಖ್ಯೆಯನ್ನು ಇನ್ನೂ ಅಪ್ ಡೇಟ್ ಮಾಡಿಲ್ಲ ಎಂದು ಕೇಂದ್ರ ಟೆಲಿಕಾಂ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಡೈರೆಕ್ಟ್ ಭೆನಿಫಿಟ್ ಟ್ರಾನ್ಸ್ಫರ್ ಯೋಜನೆಯಡಿ, ಅಡುಗೆ ಅನಿಲ, ಸ್ಕಾಲರ್ ಶಿಪ್, ಪಿಂಚಣಿ ಮತ್ತು ಬ್ಯಾಂಕ್ ಖಾತೆಗಳಲ್ಲಿ ಅಧಾರ್ ನೀಡಿ ಉಪಯೋಗ ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.