ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಪ್ರತಿಕ್ರಿಯೆ ನೀಡುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಫ್ಲೈ ಓವರ್ ದುರಂತ: ಗಾಯಾಳುಗಳನ್ನು ಭೇಟಿ ಮಾಡಿದ ರಾಹುಲ್

ಉತ್ತರ ಕೋಲ್ಕತಾದಲ್ಲಿ ಸಂಭವಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

ಕೋಲ್ಕತಾ: ಉತ್ತರ ಕೋಲ್ಕತಾದಲ್ಲಿ ಸಂಭವಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಗಾಯಾಳುಗಳನ್ನು ಭೇಟಿಯಾಗಿರುವುದಾಗಿ ತಿಳಿದುಬಂದಿದೆ.

ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿ ಮಾಡಲು ಕೋಲ್ಕತಾ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿಯವರು ಗಾಯಾಳುಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಸಂಪೂರ್ಣವಾಗಿ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

ಇನ್ನು ಭೇಟಿ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಫ್ಲೈ ಓವರ್ ಪ್ರಕರಣ ದೊಡ್ಡ ದುರಂತವಾಗಿದೆ. ಗಾಯಾಳುಗಳ ಆರೋಗ್ಯ ವಿಚಾರಿಸುವ ಸಲುವಾಗಿ ಇಲ್ಲಿಗೆ ಭೇಟಿ ನೀಡಿದ್ದೇನೆ. ಸಂಕಷ್ಟದಲ್ಲಿರುವವರಿಗೆ ನಮ್ಮಿಂದ ಸಾಧ್ಯವಾದಷ್ಟು ಸಹಾಯಬೇಕಿದ್ದು, ಘಟನೆಯಲ್ಲಿ ಗಾಯಗೊಂಡವರಿಗೆ ಜನರು ಅಗತ್ಯ ಸಹಾಯಗಳನ್ನು ಮಾಡಬೇಕೆಂದು ಕರೆ ನೀಡಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ರಾಜಕೀಯವಾಗಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಉತ್ತರ ಕೊಲ್ಕತ್ತಾದ ಬಾಬಾ ಬಜಾರ್‌ನಲ್ಲಿರುವ ಹಳೆಯ ಗಣೇಶ್ ಟಾಕೀಸ್ (ಗಿರೀಶ್ ಪಾರ್ಕ್) ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ವಿವೇಕಾನಂದ ಫ್ಲೈಓವರ್ ಕುಸಿದು ಬಿದ್ದಿತ್ತು. ಫ್ಲೈ ಓವರ್ ಕುಸಿದ ಪರಿಣಾಮ ಸೇತುವೆ ಕೆಳಗಿದ್ದ ಹಲವು ಸುಮಾರು 24 ಮಂದಿ ಸಾವನ್ನಪ್ಪಿ, ಹಲವರು ಅವಶೇಷಗಳಿಡಿ ಸಿಲುಕಿಕೊಂಡಿದ್ದರು. ರಕ್ಷಣಾ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು 90ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ