ನವದೆಹಲಿ: ಇಸಿಸ್ ಉಗ್ರ ಸಂಪರ್ಕ ಹೊಂದಿದ್ದಾರೆಂಬ ಶಂಕೆ ಮೇರೆಗೆ ಬಂಧನಕ್ಕೊಳಗಾಗಿದ್ದ ನಾಲ್ವರು ಭಾರತೀಯರನ್ನು ಸಿರಿಯಾ ಸರ್ಕಾರ ಬಿಡುಗಡೆ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಹೇಳಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಸಿರಿಯಾದಲ್ಲಿ ಬಂಧನಕ್ಕೊಳಗಾಗಿದ್ದ ನಾಲ್ವರು ಭಾರತಿಯರನ್ನು ಬಿಡುಗಡೆ ಮಾಡಲಾಗಿದ್ದು, ರಕ್ಷಣೆಮಾಡಲಾಗಿದೆ ಎಂದು ಹೇಳಿದ್ದಾರೆ.