ಸಾಂದರ್ಭಿಕ ಚಿತ್ರ 
ದೇಶ

ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಹೋಗಿದ್ದ ಬಿಜೆಪಿ ಯುವ ಘಟಕ ನೇತಾರನ ಮೇಲೆ ಗುಂಡು

ಚತ್ತೀಸ್‌ಗಢದ ಬಿಜಾಪುರ್ ಜಿಲ್ಲೆಯಲ್ಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಹೋಗಿದ್ದ ಬಿಜೆಪಿ ಯುವ ಘಟಕ ನೇತಾರನ ಮೇಲೆ ಗುಂಡಿನ ದಾಳಿ...

ರಾಯ್ಪುರ್: ಚತ್ತೀಸ್‌ಗಢದ ಬಿಜಾಪುರ್ ಜಿಲ್ಲೆಯಲ್ಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲು ಹೋಗಿದ್ದ ಬಿಜೆಪಿ ಯುವ ಘಟಕ ನೇತಾರನ ಮೇಲೆ ಗುಂಡಿನ ದಾಳಿ ನಡೆದಿದೆ.
ಭಾನುವಾರ ಬೆಳಗ್ಗೆ ಸರಿಸುಮಾರು 8 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿಗೊಳಗಾದ ಬಿಜಾಪುರ್ ಜಿಲ್ಲೆಯ ಬಿಜೆವೈಎಂ ಅಧ್ಯಕ್ಷ ಮುರಳಿ ಕೃಷ್ಣ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಬಿಜಾಪುರ್ ಎಸ್ಪಿ ಕೆ.ಎಲ್ ಧ್ರುವ್ ಹೇಳಿದ್ದಾರೆ.
ದಾಳಿ ನಡೆಸಿದ್ದು ನಕ್ಸಲರು ಎಂದು ಶಂಕಿಸಲಾಗುತ್ತಿದೆ. ದುಷ್ಕರ್ಮಿಗಳು ದೇಸಿ ಗನ್ ಮತ್ತು ಹರಿತವಾದ ಆಯುಧಗಳಿಂದ ನಾಯ್ಡು ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ದುಷ್ಕರ್ಮಿಗಳು ಹಾರಿಸಿದ ಎರಡು ಗುಂಡು ನಾಯ್ಡು ಅವರ ಹೆಗಲಿಗೆ ಮತ್ತು ಸೊಂಟಕ್ಕೆ ತಾಗಿದೆ. ಆಮೇಲೆ ಅವರು ಇನ್ನಷ್ಟು ಹಲ್ಲೆ ನಡೆಸಲು ಮುಂದಾಗಿದ್ದು, ಕೂಡಲೇ ಅಲ್ಲಿದ್ದ ಜನ ನಾಯ್ಡು ಅವರನ್ನು ರಕ್ಷಣೆ ಮಾಡಿದ್ದಾರೆ. 
ಗಂಭೀರ ಗಾಯಗೊಳಗಾದ ನಾಯ್ಡು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯ್ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!