ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್- ಡಿಎಂಕೆ ನಾಯಕ ಕರುಣಾನಿಧಿ 
ದೇಶ

ತಮಿಳುನಾಡು ಚುನಾವಣೆ: 41 ಕ್ಷೇತ್ರಗಳನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟ ಡಿಎಂಕೆ

ತಮಿಳುನಾಡಿನಲ್ಲಿ ಹಲವು ವಾರಗಳಿಂದ ಬಗೆಹರಿಯದೆ ಉಳಿದಿದ್ದ ಡಿಎಂಕೆ- ಕಾಂಗ್ರೆಸ್ ಸೀಟು ಹಂಚಿಕೆ ಗೊಂದಲಕ್ಕೆ ತೆರೆಬಿದ್ದಿದ್ದು ಡಿಎಂಕೆ ಕಾಂಗ್ರೆಸ್ ಗೆ 41 ಸೀಟುಗಳನ್ನು ಬಿಟ್ಟುಕೊಟ್ಟಿದೆ.

ಚೆನ್ನೈ: ತಮಿಳುನಾಡಿನಲ್ಲಿ ಹಲವು ವಾರಗಳಿಂದ ಬಗೆಹರಿಯದೆ ಉಳಿದಿದ್ದ ಡಿಎಂಕೆ- ಕಾಂಗ್ರೆಸ್ ಸೀಟು ಹಂಚಿಕೆ ಗೊಂದಲಕ್ಕೆ ತೆರೆಬಿದ್ದಿದ್ದು ಡಿಎಂಕೆ ಕಾಂಗ್ರೆಸ್ ಗೆ 41 ಸೀಟುಗಳನ್ನು ಬಿಟ್ಟುಕೊಟ್ಟಿದೆ.
ಮೇ.16 ರಂದು ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಕರುಣಾನಿಧಿ ನೇತೃತ್ವದ ಡಿಎಂಕೆ ಪಕ್ಷ ಕಾಂಗ್ರೆಸ್ ಗೆ 41 ಸೀಟುಗಳನ್ನು ಬಿಟ್ಟುಕೊಟ್ಟಿದೆ. ಸೀಟು ಹಂಚಿಕೆಯಾಗಬೇಕಿರುವ ವಿಧಾನಸಭಾ ಕ್ಷೇತ್ರಗಳ ಬಗ್ಗೆ ಡಿಎಂಕೆ-ಕಾಂಗ್ರೆಸ್ ನಾಯಕರು ಚರ್ಚೆ ನಡೆಸಲಿದ್ದಾರೆ.
ಕರುಣಾನಿಧಿ ಅವರೊಂದಿಗೆ ಮಾತುಕತೆ ನಡೆಸಿರುವ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಕಾಂಗ್ರೆಸ್ ಗೆ 41 ಸೀಟುಗಳನ್ನು ಬಿಟ್ಟುಕೊಡುವ ಡಿಎಂಕೆ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಕನಿಷ್ಠ 45 ವಿಧಾನಸಭಾ ಕ್ಷೇತ್ರಗಳಲ್ಲಿ ಸೀಟುಹಂಚಿಕೆ ಮಾಡಿಕೊಳ್ಳಬೇಕೆಂದು ಕಾಂಗ್ರೆಸ್ ಉದ್ದೇಶಿಸಿತ್ತು. ಆದರೆ ಡಿಎಂಕೆ 41 ಕ್ಷೇತ್ರಗಳಲ್ಲಿ ಮಾತ್ರ ಸೀಟು ಹಂಚಿಕೆಗೆ ಮುಂದಾಗಿದೆ. ತಮಿಳುನಾಡಿನಲ್ಲಿ ಕರುಣಾನಿಧಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಯಶಸ್ವಿಯಾಗುತ್ತೇವೆ ಎಂದು ಗುಲಾಂ ನಬಿ ಆಜಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ