ಬಾಬಾ ರಾಮ್ ದೇವ್ 
ದೇಶ

'ಭಾರತ್ ಮಾತಾ ಕೀ ಜೈ' ಘೋಷಣೆ ಕೂಗದವರ ತಲೆ ಕಡಿಯುತ್ತಿದ್ದೆ: ಬಾಬಾ ರಾಮ್ ದೇವ್

'ಭಾರತ್ ಮಾತಾ ಕೀ ಜೈ' ಘೋಷಣೆ ಕೂಗದವರ ತಲೆ ಕಡಿಯುತ್ತಿದ್ದೆ. ಆದರೆ, ಸಂವಿಧಾನವನ್ನು ಗೌರವಿಸುವುದರಿಂದ ಹಾಗೆ ಮಾಡಲು ಸಾಧ್ಯವಿಲ್ಲ...

ಚಂಡೀಗಢ: 'ಭಾರತ್ ಮಾತಾ ಕೀ ಜೈ' ಘೋಷಣೆ ಕೂಗದವರ ತಲೆ ಕಡಿಯುತ್ತಿದ್ದೆ. ಆದರೆ, ಸಂವಿಧಾನವನ್ನು ಗೌರವಿಸುವುದರಿಂದ ಹಾಗೆ ಮಾಡಲು ಸಾಧ್ಯವಿಲ್ಲ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಸೋಮವಾರ ಹೇಳಿದ್ದಾರೆ.

ಹರಿಯಾಣದಲ್ಲಿ ಆರ್ ಎಸ್ಎಸ್ ಆಯೋಜನೆ ಮಾಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನಾವು ನಮ್ಮ ದೇಶದ ಕಾನೂನು ಹಾಗೂ ಸಂವಿಧಾನವನ್ನು ಗೌರವಿಸುತ್ತೇವೆ. ಇಲ್ಲದೆ ಹೋಗಿದ್ದರೆ, ಭಾರತ ಮಾತೆಗೆ ಅಗೌರವ ಸೂಚಿಸುವ ಒಬ್ಬರ ತಲೆಯಲ್ಲ ಸಾವಿರ ಹಾಗೂ ಲಕ್ಷ ತಲೆಗಳನ್ನು ಉರುಳಿಸುತ್ತಿದ್ದೆವು ಎಂದು ಹೇಳಿದ್ದಾರೆ.

ಬಾಬಾ ರಾಮ್ ದೇವ್ ಅವರ ಈ ಹೇಳಿಕೆಗೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಕಿಡಕಾರಿದ್ದು,  ರಾಮ್ ದೇವ್ ಅವರು ಆರ್ ಎಸ್ಎಸ್ ಸಭೆಯಲ್ಲಿ ತಲೆ ಕಡಿಯುವುದಾಗಿ ಬೆದರಿಕೆ ಹಾಕಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ರೀತಿಯ ಹಿಂಸಾತ್ಮಕ ಹೇಳಿಕೆ ನೀಡಿರುವುದು ಸರಿಯಲ್ಲ. ಮೋದಿಯವರು ಇದರ ಬಗ್ಗೆ ಯಾವ ರೀತಿಯ ಕ್ರಮಕೈಗೊಳ್ಳುತ್ತಾರೆಂದು ಕಾದು ನೋಡಬೇಕಿದೆ ಎಂದು ಕಾಂಗ್ರೆಸ್ ವಕ್ತಾರ ಸಂಜಯ್ ಝಾ ಟ್ವಿಟರ್ ನಲ್ಲಿ ಹೇಳಿಕೊಂದಿದ್ದಾರೆ.
 
ಈ ಹಿಂದೆ ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿ ಆರ್ ಎಸ್ಎಸ್ ಸಭೆಯಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಅವರು, ಜೆಎನ್ ಯು ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳು ಕೇಳಿಬಂದಿವೆ. ಪ್ರತಿಯೊಬ್ಬರೂ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗವಂತಾಗಬೇಕು. ಯುವಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಇದು ಪೂರಕವಾಗಬೇಕೆಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಹೈದರಾಬಾದ್ ನ ಸಂಸದ ಓವೈಸಿ, ನನ್ನ ಕುತ್ತಿಗೆ ಮೇಲೆ ಚೂರಿ ಇಟ್ಟರೂ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳುವುದಿಲ್ಲ. ಘೋಷಣೆಯನ್ನು ಕೂಗಿ, ದೇಶಭಕ್ತಿ ಸಾಬೀತುಪಡಿಸಬೇಕೆಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ. ಹಾಗಾಗಿ ಕಾನೂನು ಉಲ್ಲಂಘನೆಯ ಪ್ರಶ್ನೆ ಇಲ್ಲಿ ಹುಟ್ಟುವುದಿಲ್ಲ. ಈ ನಿಲುವಿಗೆ ನಾನು ಬದ್ಧನಾಗಿದ್ದೇನೆ ಯಾವುದೇ ಕಾರಣಕ್ಕೂ ಘೋಷಣೆ ಕೂಗುವುದಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್