ನವದೆಹಲಿ: ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಮುಖ್ಯವಾಗಿ ಯುವ ಸ್ನೇಹಿತರು ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ 18. ಅಸ್ಸಾಂನ 65 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಈ ವರೆಗೂ ಪಶ್ಚಿಮ ಬಂಗಾಳದಲ್ಲಿ ಶೇ.18 ಹಾಗೂ ಅಸ್ಸಾಂ ನಲ್ಲಿ ಶೇ.19ರಷ್ಟು ಮತದಾನವಾಗಿರುವುದಾಗಿ ತಿಳಿದುಬಂದಿದೆ.