ಗುವಾಹಟಿ: ಮೇಘಾಲಯ ಹಾಗೂ ಅಸ್ಸಾಂ ಸೇರಿದಂತೆ ಈಶಾನ್ಯ ಭಾರತದ ಹಲವು ರಾಜ್ಯಗಳಲ್ಲಿ ಮಂಗಳವಾರ 5.4 ತೀವ್ರತೆಯ ಭೂಕಂಪನವಾಗಿದೆ.
ರಿಕ್ಟರ್ ಮಾಪಕದಲ್ಲಿ 5.4ರಷ್ಟು ಕಂಪನದ ತೀವ್ರತೆ ದಾಖಲಾಗಿದ್ದು, ಪೂರ್ವಗಾರೋ ಪರ್ವತದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.
ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಈ ಭೂಕಂಪನ ಸಂಭವಿಸಿದ್ದು, ಪ್ರಾಣ ಹಾನಿ ಹಾಗೂ ಆಸ್ತಿ ಹಾನಿ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭವಾಗಿಲ್ಲ.