ಅರವಿಂದ್ ಕೇಜ್ರಿವಾಲ್ 
ದೇಶ

ಭಾರತಕ್ಕೆ ಪಾಕ್ ತನಿಖಾ ತಂಡ ಭೇಟಿ: ಬಿಜೆಪಿ ಕ್ರಮವನ್ನು ಖಂಡಿಸಿದ ಕೇಜ್ರಿವಾಲ್

ಪಠಾಣ್ ಕೋಟ್ ದಾಳಿ ತನಿಖೆ ನಡೆಸಲು ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಬರಲು ಅವಕಾಶ ನೀಡಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ...

ನವದೆಹಲಿ: ಪಠಾಣ್ ಕೋಟ್ ದಾಳಿ ತನಿಖೆ ನಡೆಸಲು ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಬರಲು ಅವಕಾಶ ನೀಡಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಭಾರತ ಮಾತೆಯ ಬೆನ್ನಿಗೆ ಚೂರಿ ಹಾಕಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಭಾರತ ಮಾತಾ ಕೀ ಜೈ ಎಂದು ಒಂದು ಬದಿ ಹೇಳುತ್ತಾ, ಮತ್ತೊಂದು ಬದಿ ಐಎಸ್ ಐಗೆ ಭಾರತದ ಮಣ್ಣು ತುಳಿಯಲು ಅವಕಾಶ ಮಾಡಿಕೊಟ್ಟ ಬಿಜೆಪಿ ಸರ್ಕಾರ, ಭಾರತ ಮಾತೆಯ ಬೆನ್ನಿಗೆ ಚೂರಿ ಹಾಕಿದೆ ಎಂದು ಆಪಾದಿಸಿದ್ದಾರೆ.
ಪಾಕಿಸ್ತಾನದ ಪ್ರಧಾನಿ ನವಾಜ್ ಶರೀಫ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯೆ ಯಾವ್ ಡೀಲ್ ನಡೆದಿದೆ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಭಾರತಕ್ಕೆ ಬರಲು ಐಎಸ್ ಐಗೆ ಅವಕಾಶ ಮಾಡಿಕೊಟ್ಟು ಪ್ರಧಾನಿ ಮೋದಿ ಭಾರತ ಮಾತೆಗೆ ದೊಡ್ಡ ಮೋಸ ಮಾಡಿದ್ದಾರೆ. ಮೋದಿ ಮತ್ತು ನವಾಜ್ ಮಧ್ಯೆ ಯಾವ ಡೀಲ್ ನಡೆದಿದೆ ಎಂಬುದು ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ. 
ಜನವರಿ 2016ರಂದು ನಡೆದ ಪಠಾಣ್ ಕೋಟ್ ದಾಳಿ ಸಂಬಂಧ ತನಿಖೆ ನಡೆಸಲು ಪಾಕಿಸ್ತಾನದ ತನಿಖಾ ತಂಡ ಭಾರತಕ್ಕೆ ಭೇಟಿ ನೀಡಿ, ಕಳೆದ ಶುಕ್ರವಾರ ಪಾಕಿಸ್ತಾನಕ್ಕೆ ವಾಪಸ್ ತೆರಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!