ಜಯಲಲಿತಾ ಮತ್ತು ದೇವಿ 
ದೇಶ

ಸಿಎಂ ಜಯಲಲಿತಾ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಮಂಗಳಮುಖಿ

ತಮಿಳುನಾಡು ಮುಖ್ಯಮಂತ್ರಿ ಹಾಗೂ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಜಯಲಲಿತಾ ವಿರುದ್ದ ಮಂಗಳಮುಖಿಯೊಬ್ಬರು ಕಣಕ್ಕಿಳಿಯಲು ನಿರ್ಧರಿಸಿದ್ದಾರೆ...

ಚೆನ್ನೈ:  ತಮಿಳುನಾಡು ಮುಖ್ಯಮಂತ್ರಿ  ಹಾಗೂ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಜಯಲಲಿತಾ ವಿರುದ್ದ ಮಂಗಳಮುಖಿಯೊಬ್ಬರು ಕಣಕ್ಕಿಳಿಯಲು ನಿರ್ಧರಿಸಿದ್ದಾರೆ
ತಮಿಳುನಾಡಿನ ಚೆನ್ನೈ ಮಹಾನಗರದ ಆರ್ ಕೆ ನಗರ ಅಸೆಂಬ್ಲಿ ಕ್ಷೇತ್ರದಲ್ಲಿ ಜಯಲಲಿತಾ ಸ್ಪರ್ಧಿಸುತ್ತಿದ್ದು ಅವರ ಎದುರು  33 ವರ್ಷದ ದೇವಿ ಎನ್ನುವ ಮಂಗಳಮುಖಿ ಚುನಾವಣಾ ಕಣಕ್ಕಿಳಿಯುತ್ತಿದ್ದಾರೆ.

ತಮಿಳು ನಟ ಮತ್ತು ನಿರ್ದೇಶಕ ಸೀಮನ್ ಮುಂದಾಳುತ್ವದ ಎನ್ಟಿಕೆ (ನಾಮ್ ತಮಿಳರ್ ಕಚ್ಚಿ) ಎನ್ನುವ ಪಕ್ಷದಿಂದ  ದೇವಿ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಗಮನಿಸಬೇಕಾದ ಅಂಶವೇನಂದರೆ, ಸಿಎಂ ವಿರುದ್ದ ಸ್ಪರ್ಧಿಸುತ್ತಿರುವ ದೇವಿ ಅಸಲಿಗೆ ಜಯಾಲಲಿತಾ ಅವರ ಅಭಿಮಾನಿಯಂತೆ.
ಸೇಲಂ ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಹನ್ನೆರಡನೇ ಕ್ಲಾಸ್ ಓದಿರುವ ದೇವಿ ಸುಮಾರು ಇನ್ನೂರಕ್ಕೂ ಹೆಚ್ಚು ಬಡ ವಿದ್ಯಾಥಿಗಳ ವಿದ್ಯಾಭ್ಯಾಸಕ್ಕೆ ಆಸರೆಯಾಗಿದ್ದಾರೆ. ಇದರ ಜೊತೆಗೆ ವೃದ್ದಾಶ್ರಮದ ಅರವತ್ತು ಜನರ ಜಬಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಸಾಮಾಜಿಕ ಕಾರ್ಯಕರ್ತೆಯಾಗಿರುವ ದೇವಿ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ, ಒಂದು ವೇಳೆ ಗೆದ್ದು ಬಂದರೆ ಕ್ಷೇತ್ರದ ಅಭಿವೃದ್ದಿಗೆ ತನ್ನದೇ ಆದ ಯೋಜನೆಯನ್ನು ಹಾಕಿಕೊಂಡಿದ್ದಾರೆ ದೇವಿ. ನಾನು ಜಯಲಲಿತಾ ವಿರುದ್ಧ ಸ್ಪರ್ಧಿಸುತ್ತಿಲ್ಲ, ಕ್ಷೇತ್ರದ ಜನತೆಯ ಪ್ರತಿನಿಧಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಜಯಲಲಿತಾ ವಿರುದ್ದ ಗೆದ್ದರೂ ಗೆಲ್ಲಬಹುದು ಎನ್ನುವ ಸಣ್ಣ ವಿಶ್ವಾಸದಲ್ಲಿದ್ದೇನೆ. ಗೆದ್ದರೆ, ಆರ್ ಕೆ ನಗರವನ್ನು ಮೊದಲು ಕಸಮುಕ್ತ ಕ್ಷೇತ್ರವನ್ನಾಗಿ ಮಾಡಬೇಕು ಎನ್ನುವುದು ನನ್ನ ಉದ್ದೇಶ, ಜೊತೆಗೆ ಸರಕಾರೀ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಒದಗಿಸುವುದು ನನ್ನ ಆದ್ಯತೆ ಎಂದು ಹೇಳಿದ್ದಾರೆ. 235 ಸ್ಥಾನ ಹೊಂದಿರುವ ತಮಿಳುನಾಡು ವಿಧಾನಸಭೆಗೆ ಮೇ 16ರಂದು ಚುನಾವಣೆ ನಡೆಯಲಿದೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT