ಮುಜಾಫ್ಫರ್ಪುರ್'ನಲ್ಲಿ ಮಗುಚಿಬಿದ್ದ ಕಾರು: 4 ಸಾವು, 4 ಗಾಯ
ಬಿಹಾರ ರಾಜ್ಯದ ಮುಜಾಫ್ಫರ್ಪುರ್ ನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕಾರೊಂದು ಮಗುಚಿಬಿದ್ದ ಪರಿಣಾಮ 4 ಸ್ಥಳದಲ್ಲೇ ಸಾವನ್ನಪ್ಪಿ, 4 ಜನ ಗಂಭೀರವಾಗಿ...
ಮುಜಾಫ್ಫರ್ಪುರ್: ಬಿಹಾರ ರಾಜ್ಯದ ಮುಜಾಫ್ಫರ್ಪುರ್ ನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕಾರೊಂದು ಮಗುಚಿಬಿದ್ದ ಪರಿಣಾಮ 4 ಸ್ಥಳದಲ್ಲೇ ಸಾವನ್ನಪ್ಪಿ, 4 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಕಾರು ಅಪಘಾತಕ್ಕೀಡಾಗುತ್ತಿದ್ದಂತೆ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.