ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಡಿಡಿಸಿಎ ಹಗರಣಕ್ಕೆ ಸಂಬಂಧಿಸಿದಂತೆ ಅರುಣ್ ಜೇಟ್ಲಿ ವಿರುದ್ಧ ಆರೋಪ ಮಾಡಿದ್ದ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕರಾದ ಕುಮಾರ್ ವಿಶ್ವಾಸ್, ಆಶುತೋಷ್, ಸಂಜಯ್ ಸಿಂಗ್, ರಾಘವ್ ಚಡ್ಡಾ ಹಾಗೂ ದೀಪಿಕಾ ಬಾಜ್ಪೇಯಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.
ಈ ಸಂಬಂಧ ಕೋರ್ಟ್ ಎಲ್ಲಾ ಆರೋಪಿಗಳಿಗೂ ಸಮನ್ಸ್ ಜಾರಿ ಮಾಡಿತ್ತು. ಇಂದು ವಿಚಾರಣೆಗೆ ಹಾಜರಾದ ಆರೋಪಿಗಳಿಗೆ ಜಾಮೀನು ನೀಡಿರುವ ಕೋರ್ಟ್, ವಿಚಾರಣೆಯನ್ನು ಮೇ 19ಕ್ಕೆ ಮುಂದೂಡಿದೆ.