ಎನ್ಐಟಿ ಶ್ರೀನಗರ 
ದೇಶ

ಎನ್ಐಟಿ ಶ್ರೀನಗರ ವಿದ್ಯಾರ್ಥಿಗಳು ನಂತರ ಪರೀಕ್ಷೆ ಬರೆಯಬಹುದು: ಕೇಂದ್ರ

ಘರ್ಷಣೆಯಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಶ್ರೀನಗರದ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್​ಐಟಿ) ವಿದ್ಯಾರ್ಥಿಗಳು...

ಶ್ರೀನಗರ: ಘರ್ಷಣೆಯಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಶ್ರೀನಗರದ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್​ಐಟಿ) ವಿದ್ಯಾರ್ಥಿಗಳು ತಡವಾಗಿ ಪರೀಕ್ಷೆಗೆ ಹಾಜರಾಗಬಹುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಮಾನವ ಸಂಪನ್ಮೂಲ ಸಚಿವಾಲಯದ ತ್ರಿಸದಸ್ಯ ತಂಡ ಎನ್​ಐಟಿ ಆವರಣಕ್ಕೆ ಭೇಟಿ ನೀಡಿದ ನಂತರ ಈ ನಿರ್ಧಾರ ಹೊರಬಿದ್ದಿದೆ. ಪರಿಸ್ಥಿತಿಯ ಅವಲೋಕನಕ್ಕಾಗಿ ಸ್ಥಳಕ್ಕೆ ಭೇಟಿ ನೀಡಿದ್ದ ತಂಡ ಪ್ರಕ್ಷುಬ್ಧತೆಯನ್ನು ನಿವಾರಿಸುವ ಸಲುವಾಗಿ ಚಳವಳಿ ನಿರತ ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿತ್ತು.
ಎನ್​ಐಟಿ ಆವರಣದಲ್ಲಿ ಅಭದ್ರತೆಯ ವಾತಾವರಣ ಇದೆ ಎಂದು ಹೊರಗಿನ ವಿದ್ಯಾರ್ಥಿಗಳು ಕೇಂದ್ರ ತಂಡಕ್ಕೆ ತಿಳಿಸಿದ್ದರು. ಅಲ್ಲದೆ ತಾವು ಸದ್ಯಕ್ಕೆ ತಮ್ಮ ಮನೆಗಳಿಗೆ ವಾಪಸಾಗಬಯಸಿದ್ದು, ತಮಗೆ ತಡವಾಗಿ ಪರೀಕ್ಷೆಗೆ ಬರೆಯಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದರು.
ಕಳೆದ ವಾರ ವಿಶ್ವ ಕಪ್‌ ಸೆಮಿ ಫೈನಲ್‌ ಪಂದ್ಯದಲ್ಲಿ ಭಾರತ, ವೆಸ್ಟ್‌ ಇಂಡೀಸ್‌ ತಂಡದೆದುರು ಪರಾಭವಗೊಂಡದ್ದನ್ನು ಅನುಸರಿಸಿ ಶ್ರೀನಗರದ ಎನ್‌ಐಟಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಗುಂಪು ಪರಸ್ಪರ ಹೊಡೆದಾಡಿಕೊಂಡ ಕಾರಣ ತೀವ್ರ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT