ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ದೇಶ

"ರಿಮೋಟ್ ಕಂಟ್ರೋಲ್" ಸರ್ಕಾರದಿಂದಾಗಿ ದೇಶ ನಲುಗಿತ್ತು: ಪ್ರಧಾನಿ ಮೋದಿ

ಕಳೆದ ಯುಪಿಎ ಅವಧಿಯ "ರಿಮೋಟ್ ಕಂಟ್ರೋಲ್" ಸರ್ಕಾರದಿಂದಾಗಿ ದೇಶ ಸಾಕಷ್ಟು ನಲುಗಿತ್ತು. ಆದೇ ಸ್ಥಿತಿ ಅಸ್ಸಾಂನಲ್ಲಿ ಮರುಕಳಿಸಲು ತಾವು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ...

ರಾಹಾ: ಕಳೆದ ಯುಪಿಎ ಅವಧಿಯ "ರಿಮೋಟ್ ಕಂಟ್ರೋಲ್" ಸರ್ಕಾರದಿಂದಾಗಿ ದೇಶ ಸಾಕಷ್ಟು ನಲುಗಿತ್ತು. ಆದೇ ಸ್ಥಿತಿ ಅಸ್ಸಾಂನಲ್ಲಿ ಮರುಕಳಿಸಲು ತಾವು ಬಿಡುವುದಿಲ್ಲ ಎಂದು ಪ್ರಧಾನಿ  ನರೇಂದ್ರ ಮೋದಿ ಹೇಳಿದ್ದಾರೆ.

ಶುಕ್ರವಾರ ಅಸ್ಸಾಂನ ರಾಹಾದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯುಪಿಎ ಸರ್ಕಾರ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ತೀವ್ರ  ತರಾಟೆಗೆ ತೆಗೆದುಕೊಂಡರು. ಈ ವೇಳೆ ಮಾತನಾಡಿದ ಅವರು, ಟ್ ಕಂಟ್ರೋಲ್" ಸರ್ಕಾರದಿಂದಾಗಿ ದೇಶ ಸಾಕಷ್ಟು ನಲುಗಿತ್ತು. ಆದೇ ಸ್ಥಿತಿ ಅಸ್ಸಾಂನಲ್ಲಿ ಮರುಕಳಿಸಲು ತಾವು ಬಿಡುವುದಿಲ್ಲ  ಎಂದು ಹೇಳಿದರು.

ಅಂತೆಯೇ ತಮ್ಮ ವಿರುದ್ಧ ಈ ಹಿಂದೆ ವಾಗ್ದಾಳಿ ನಡೆಸಿದ್ದ ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ಅವರ ವಿರುದ್ಧವೂ ಟೀಕೆ ಮಾಡಿದ ನರೇಂದ್ರ ಮೋದಿ, "ನಮ್ಮದು ಮಾತಿನ  ಸರ್ಕಾರವಾಗಿರಲಿಲ್ಲ, ಹೆಚ್ಚು ಕೆಲಸ ಮಾಡುವ ಸರ್ಕಾರವಾಗಿತ್ತು' ಎಂಬ ಟೀಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. "ಮನಮೋಹನ್ ಸಿಂಗ್ ಅವರೇ, ನೀವು ಅಧಿಕಾರದಲ್ಲಿದ್ದಾಗ ನಡೆದ  ಅವ್ಯವಹಾರಗಳೇ ಇಂದು ಹೆಚ್ಚೆಚ್ಚು ಮಾತನಾಡುತ್ತಿವೆ. ಡಾ.ಸಿಂಗ್ ಅವರು ಹೇಳಿದ್ದು ನಿಜ, ಅವರು ಅಧಿಕಾರದಲ್ಲಿದ್ದಾಗ ನಡೆದ ಅವ್ಯವಹಾರಗಳು ಇಂದಿಗೂ ಮಾತನಾಡುತ್ತಿವೆ ಎಂದುಸ  ಕುಟುಕಿದರು.

ಕಾಂಗ್ರೆಸ್ ಪಕ್ಷ ಅಸ್ಸಾಂ ಅನ್ನು ತನ್ನ ರಾಜಕೀಯ ಸ್ವಹಿತಾಸಕ್ತಿಗೆ ಬಳಸಿಕೊಳ್ಳುತ್ತಿದ್ದು, ಹಿಂದುಳಿದ ಮತ್ತು ರಿಮೋಟ್ ಕಂಟ್ರೋಲ್ ಪ್ರದೇಶವನ್ನಾಗಿ ಕಾಂಗ್ರೆಸ್ ಉಳಿಸಿಕೊಂಡಿದೆ. ಕಾಂಗ್ರೆಸ್​ನ  ಅಸ್ಥಿರ ದುರಾಡಳಿತದಿಂದ ರಾಜ್ಯ ಕಂಗೆಟ್ಟಿದ್ದು, ಬಿಜೆಪಿ ನೇತೃತ್ವದ ಸರ್ಕಾರವನ್ನು ಬೃಹತ್ ಅಂತರದಿಂದ ಗೆಲ್ಲಿಸುವ ಮೂಲಕ ರಾಜಕೀಯ ಅಸ್ಥಿರತೆ ಸೃಷ್ಟಿಸಿರುವ ಪಕ್ಷವನ್ನು ಅಧಿಕಾರದಿಂದ  ಕಿತ್ತೊಗೆಯಬೇಕು ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಪ್ರಧಾನಿ ಮೋದಿ ಅಸ್ಸಾಂ ಜನತೆಯಲ್ಲಿ ಮನವಿ ಮಾಡಿದರು.

ಅಲ್ಲದೆ ಬಿಜೆಪಿ ಅಧಿಕಾರಕ್ಕೆ ಬಂದರೆ ಅಸ್ಸಾಂ ಅನ್ನು ಹಿಂದುಳಿದ ರಾಜ್ಯ ಮತ್ತು ರಿಮೋಟ್ ಕಂಟ್ರೋಲ್ ಮುಕ್ತವಾಗಿಸುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್