Netaji Subhas Chandra Bose International Airport
ಕೊಲ್ಕತ್ತಾ: ಕೊಲ್ಕತ್ತಾದ ಏರ್ ಟ್ರಾಫಿಕ್ ಕಂಟ್ರೋಲ್ ನ(ಎಟಿಸಿ) ಸಂವಹನ ವ್ಯವಸ್ಥೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಗುರುವಾರ 300 ವಿಮಾನಗಳೊಂದಿಗೆ ಎಟಿಸಿ ಸಂಪರ್ಕ ಕಡಿದುಕೊಂಡಿತ್ತು ಎಂದು ಬಲ್ಲಮೂಲಗಳು ವರದಿ ಮಾಡಿವೆ.
ಎಟಿಸಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಇನ್ನಿತರ 300 ವಿಮಾನಗಳ ಜತೆ ಗುರುವಾರ ಬೆಳಗ್ಗೆ ಕೆಲವು ಹೊತ್ತು ಸಂಪರ್ಕ ಕಡಿದುಕೊಂಡಿತ್ತು ಎಂದು ಹೇಳಲಾಗಿದೆ.
ಹೀಗಾಗಲು ಸಂವಹನ ಸಂಪರ್ಕ ವ್ಯವಸ್ಥೆಯಲ್ಲಿ ಕಾಣಿಸಿಕೊಂಡ ಸಮಸ್ಯೆಯೇ ಕಾರಣ ಎಂದು ಎಟಿಸಿ ಹೇಳಿದೆ. ಈ ಸಮಸ್ಯೆಯನ್ನು ಪರಿಹರಿಸಲು ಸುಮಾರು 2 ಗಂಟೆ ಬೇಕಾಯಿತು ಎಂದು ಅಧಿಕೃತ ಮೂಲಗಳು ಹೇಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics