ಸುಪ್ರೀಂ ಕೋರ್ಟ್ 
ದೇಶ

ರಿಲಯನ್ಸ್ ಜಿಯೋ 4 ಜಿ ಪರವಾನಗಿ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂ ನಿಂದ ವಜಾ

ರಿಲಯನ್ಸ್ ಜಿಯೋ 4 ಜಿ ಪರವಾನಗಿಯನ್ನು ರದ್ದುಗೊಳಿಸುವಂತೆ ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ರಿಲಯನ್ಸ್ ಜಿಯೋ 4 ಜಿ ಪರವಾನಗಿಯನ್ನು ರದ್ದುಗೊಳಿಸುವಂತೆ ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ.ಟಿಎಸ್ ಠಾಕೂರ್, ನ್ಯಾ.ಎಕೆ ಸಿಕ್ರಿ, ಆರ್ ಭಾನುಮತಿ ಅವರಿದ್ದ ಪೀಠ ಆರೋಪಗಳನ್ನು ಕೇಂದ್ರ ಸರ್ಕಾರ ಇತ್ಯರ್ಥಗೊಳಿಸಬೇಕೆಂದು ಹೇಳಿದೆ.
ಮೊದಲು ರಿಲಯನ್ಸ್ ಜಿಯೋ ಗೆ ಡಾಟಾ ಸೇವೆಗಳಿಗಾಗಿ 4 ಜಿ ಪರವಾನಗಿಯನ್ನು ನೀಡಲಾಗಿತ್ತು, ಆದರೆ ಕರೆಗಳಿಗೆ 4 ಜಿ ಪರವಾನಗಿ ನೀಡಲಾಗಿರಲಿಲ್ಲ ಆದರೂ ನಂತರದ ದಿನಗಳಲ್ಲಿ ಕರೆಗಳಿಗೂ 4 ಜಿ ಪರವಾನಗಿಯ ಅನುಮತಿ ನೀಡಲಾಗಿದೆ ಎಂದು ಆರೋಪಿಸಿ ಸಿಪಿಐಎಲ್ ಎಂಬ ಎನ್ ಜಿಒ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ