ದೆಹಲಿ ಸಿಎಂ ಕೇಜ್ರಿವಾಲ್ ಮೇಲೆ ಶೂ ಎಸೆತ!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಗುರುತು ತಿಳಿಯದ ಅನಾಮಿಕ ವ್ಯಕ್ತಿಯೋರ್ವ ಶೂ ಎಸೆದ ಘಟನೆ ದೆಹಲಿಯಲ್ಲಿ ನಡೆದಿದೆ..
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಗುರುತು ತಿಳಿಯದ ಅನಾಮಿಕ ವ್ಯಕ್ತಿಯೋರ್ವ ಶೂ ಎಸೆದ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯಲ್ಲಿ ಸಮ-ಬೆಸ ಸಂಖ್ಯೆ ಯೋಜನೆ ಕುರಿತಂತೆ ಸರ್ಕಾರದ ವತಿಯಿಂದ ನಡೆಯುತ್ತಿದ್ದ ಸುದ್ದಿಗೋಷ್ಠಿ ವೇಳೆ ಕೇಜ್ರಿವಾಲ್ ಮಾತನಾಡುತ್ತಿದ್ದಾಗ, ಏಕಾಏಕಿ ಅವರತ್ತ ವ್ಯಕ್ತಿಯೋರ್ವ ಶೂ ಎಸೆದಿದ್ದಾನೆ. ಅಲ್ಲದೆ ಕೆಲ ಸಿಡಿಗಳನ್ನು ಕೂಡ ಎಸೆದು ದೆಹಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಕೂಡಲೇ ಎಚ್ಚೆತ್ತ ಆಪ್ ಕಾರ್ಯಕರ್ತರು ಆ ವ್ಯಕ್ತಿಯನ್ನು ಹೊರಗೆಳೆದುಕೊಂಡು ಹೋಗಿ ಥಳಿಸಿ, ಹೊರ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಶೂ ಎಸೆದ ವ್ಯಕ್ತಿ ಘೋಷಣೆ ವೇಳೆ ತನ್ನನ್ನು ತಾನು ಆಮ್ ಆದ್ಮಿ ಸೇನೆಯ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಇದೇ ಏಪ್ರಿಲ್ 15ರಿಂದ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಖ್ಯೆ ಯೋಜನೆ ಆರಂಭವಾಗಲಿದ್ದು, ಈ ಬಗ್ಗೆ ಮಾಹಿತಿ ನೀಡಲು ಕೇಜ್ರಿವಾಲ್ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ಶೂಎಸೆತ ಘಟನೆ ಸಂಭವಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.