ವಿಶ್ವಸಂಸ್ಥೆ: ವಿಶ್ವಸಂಸ್ಥೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಅಚರಿಸಲು ನಿರ್ಧರಿಸಲಾಗಿದೆ.
ಸುಸ್ಥಿರ ಅಭಿವೃದ್ಧಿ ಸಾಧನೆಗಾಗಿ ಅಸಮಾನತೆಯ ಎದುರಿಸುವ ಗುರಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಕಲ್ಪನಾ ಸರೋಜ್ ಫೌಂಡೇಷನ್ ನೇತೃತ್ವದಲ್ಲಿ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಇದೇ ಏಪ್ರಿಲ್ 13 ಅಂದರೆ ಅಂಬೇಡ್ಕರ್ ಅವರ ಜನ್ಮ ದಿನಕ್ಕೂ ಒಂದು ದಿನ ಮುಂಚಿತವಾಗಿ ಅವರ ಜಯಂತಿ ಆಚರಣೆ ಮಾಡಲು ವಿಶ್ವಸಂಸ್ಥೆಯ ಸದಸ್ಯರು ನಿರ್ಧರಿಸಿದ್ದಾರೆ. ಅಲ್ಲದೇ ಈ ವಿಶೇಷ ಸಂದರ್ಭದಲ್ಲಿ ಅಂಬೇಡ್ಕರ್ ಸಿದ್ಧಾಂತಗಳ ಕುರಿತು ವಿಶ್ವಸಂಸ್ಥೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಈ ವಿಚಾರವನ್ನು ಸ್ವತಃ ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಅವರು ಟ್ವಿಟರ್ ನಲ್ಲಿ ಹೇಳಿಕೊಂಡಿದ್ದು, ಜಯಂತಿ ಆಚರಣೆ ಭಾರತಕ್ಕೆ ಸಂದ ಗೌರವ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.