ನವದೆಹಲಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಗೆ ಕೇಂದ್ರ ಸರ್ಕಾರ ರು.12.230 ಕೋಟಿ ಬಿಡುಗಡೆಗೊಳಿಸಿದೆ.
ಮನರೇಗಾ ಕುರಿತು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಈ ಯೋಜನೆಗಾಗಿ ಕೇಂದ್ರ ಸರ್ಕಾರ ರು.12.230 ಕೋಟಿ ಹಣ ಬಿಡುಗಡೆಗೊಳಿಸಿದೆ.
ಕಳೆದ ಹಣಕಾಸು ವರ್ಷದಲ್ಲಿ ರಾಜ್ಯಗಳು ನೀಡಬೇಕಾಗಿರುವ ದಿನಗೂಲಿ ಬಾಕಿಯನ್ನು ಪಾವತಿಸಲು ಮತ್ತು ಮುಂದಿನ ಹಣಕಾಸು ವರ್ಷದಲ್ಲಿ ಯೋಜನೆಯನ್ನು ನಿರ್ವಹಿಸಲು ಈ ಮೊತ್ತ ಬಿಡುಗಡೆಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಬೀರೇಂದರ್ ಸಿಂಗ್ ತಿಳಿಸಿದ್ದಾರೆ.
ಮನರೇಗಾ ಯೋಜನೆಯಲ್ಲಿ ಇನ್ನು ಮುಂದೆ ದಿನಗೂಲಿ-ಸಾಮಗ್ರಿ ಅನುಪಾತ 60:40 ಪ್ರಮಾಣದಲ್ಲಿ ಪಂಚಾಯತ್ ಮಟ್ಟಕ್ಕೆ ಬದಲಾಗಿ ಜಿಲ್ಲಾ ಮಟ್ಟದಲ್ಲಿ ಪಾಲಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮನರೇಗಾ ಅಡಿ ರಾಜ್ಯಗಳಿಗೆ ಸಮರ್ಪಕ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics