ಕೊಲ್ಲಂ ಅಗ್ನಿ ದುರಂತ: ನುರಿತ ವೈದ್ಯರ ತಂಡದೊಂದಿಗೆ ಕೇರಳ ತಲುಪಿದ ಪ್ರಧಾನಿ ಮೋದಿ
ಕೇರಳದ ಮೂಕಾಂಬಿಕ ದೇಗುಲದಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇರಳ ತಲುಪಿದ್ದಾರೆಂದು...
ತಿರುವನಂತಪುರ: ಕೇರಳದ ಮೂಕಾಂಬಿಕ ದೇಗುಲದಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇರಳ ತಲುಪಿದ್ದಾರೆಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸಂತಾಪ ಸೂಚಿಸಿ ಪರಿಹಾರ ಘೋಷಣೆ ಮಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇರಳ ರಾಜ್ಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದರು. ಇದರಂತೆ ಇಂದು ಬೆಳಿಗ್ಗೆ ವಿಶೇಷ ವಾಯುಸೇನಾ ವಿಮಾನದ ಮೂಲಕ ಕೇರಳಗೆ ಪ್ರಯಾಣ ಬೆಳೆಸಿದ್ದರು. ಮೋದಿಯವರೊಂದಿಗೆ 15 ವೈದ್ಯರ ತಂಡ ಕೂಡ ಪ್ರಯಾಣ ಬೆಳೆಸಿತ್ತು.
ಇದೀಗ ಪ್ರಧಾನಿ ಮೋದಿಯವರು, ವೈದ್ಯರ ತಂಡ ಹಾಗೂ ಇನ್ನಿತರೆ ಅಧಿಕಾರಿಗಳು ಕೇರಳ ತಲುಪಿದ್ದು, ಮೋದಿಯವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.