ನವದೆಹಲಿ: ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ನೆರವು ನೀಡುವುದಾಗಿ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಭರವಸೆ ನೀಡಿದ್ದಾರೆ.
ದೇಗುಲ ಅಗ್ನಿ ದುರಂತ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಘಟನೆ ನಿಜಕ್ಕೂ ದೊಡ್ಡ ದುರಂತ. ಸುದ್ದಿ ತಿಳಿಯುತ್ತಿದ್ದಂತೆಯೇ ದೂರವಾಣಿ ಮೂಲಕ ಉಮ್ಮನ್ ಚಾಂಡಿಯವರೊಂದಿಗೆ ಮಾತುಕತೆ ನಡೆಸಲಾಯಿತು. ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಸೂಕ್ತ ರೀತಿಯಲ್ಲಿ ನೆರವು ನೀಡಲಾಗುತ್ತದೆ ಎಂದು ಅವರಿಗೆ ಭರವಸೆಯನ್ನು ನೀಡಿದ್ದೇನೆಂದು ಹೇಳಿದ್ದಾರೆ.