ತಿರುವನಂತಪುರಂ: ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರು ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ದುರ್ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿರುವ ಅವರು ಇದೀಗ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ರಕ್ಷಣಾ ಕಾರ್ಯಾಚರಣೆ ಮುಕ್ತಾಯವಾಗಿದೆ. ಇದೀಗ ಸರ್ಕಾರದ ಗಮನವೇನಿದ್ದರೂ ಗಾಯಾಳುಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುವುದು. ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವುದಾಗಿ ತಿಳಿದುಬರುತ್ತಿದೆ. ಆದರೆ, ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಘಟನೆ ಈ ಹಿಂದೆಂದೂ ಸಂಭವಿಸಿರಲಿಲ್ಲ. ಇದೊಂದು ಹೊಸ ರೀತಿಯ ಘಟನೆಯಾಗಿದೆ. ಘಟನೆಯೊಂದು ಎಚ್ಚರಿಕೆ ಗಂಟೆಯಾಗಿದೆ ಎಂದು ಹೇಳಿದ್ದಾರೆ.